ರೇವಾ (ಮಧ್ಯಪ್ರದೇಶ) :ಸ್ನೇಹಿತರೊಂದಿಗೆ ಆಟವಾಡುವಾಗ ಜಮೀನಿನಲ್ಲಿದ್ದ ಬಾಲಕನೊಬ್ಬ 60 ಅಡಿ ಆಳದ ತೆರೆದ ಬೋರ್ವೆಲ್ಗೆ ಬಿದ್ದಿರುವ ಘಟನೆಶುಕ್ರವಾರ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಬೋರ್ವೆಲ್ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯೂರ್ (6) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.
ಇತ್ತ ಬಾಲಕ ಬೋರ್ವೆಲ್ಗೆ ಬೀಳುತ್ತಿದ್ದಂತೆ ಜೊತೆಗಿದ್ದ ಮಕ್ಕಳು ಮನೆಗೆ ಓಡಿ ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಮನೆಯವರು ಹಾಗೂ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಇನ್ನೊಂದೆಡೆ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಾಲಕನಿಗೆ ಉಸಿರಾಡಲು ಯಾವುದೇ ತೊಂದರೆಯಾಗದಂತೆ ಬೋರ್ವೆಲ್ ನೊಳಗೆ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.