ಕೋಟಾ (ರಾಜಸ್ಥಾನ):ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) 720ಕ್ಕೆ 720 ಅಂಕಗಳನ್ನು ಗಳಿಸಿರುವ 67 ಅಭ್ಯರ್ಥಿಗಳು ನೂತನ ದಾಖಲೆ ನಿರ್ಮಿಸಿದ್ದಾರೆ.
ನೀಟ್ ಪರೀಕ್ಷೆ ಮೇ 5ರಂದು ನಡೆದಿತ್ತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 10 ಲಕ್ಷ ಪುರುಷ ಅಭ್ಯರ್ಥಿಗಳು ಮತ್ತು 13 ಲಕ್ಷ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು. ಈ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ರಾಜ್ಯದ ಮೂವರು ಟಾಪರ್:ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಪ್ರಕಟಗೊಂಡಿದ್ದು, ಕರ್ನಾಟಕ ರಾಜ್ಯದ ಮೂವರು ಅಭ್ಯರ್ಥಿಗಳು ಅಖಿಲ ಭಾರತ ಶ್ರೇಣಿಯಲ್ಲಿ 720ಕ್ಕೆ 720 ಅಂಕ ಪಡೆದಿದ್ದಾರೆ.
ಪ್ರಥಮ ಸ್ಥಾನ ಗಳಿಸಿದ ದೇಶದ 67 ಅಭ್ಯರ್ಥಿಗಳಲ್ಲಿ ಬೆಂಗಳೂರಿನ ನಾರಾಯಣ ಕಾಲೇಜಿನ ಸ್ಯಾಮ್ ಶ್ರೇಯಸ್ ಜೋಸೆಫ್, ಚೈತನ್ಯ ಶಿಕ್ಷಣ ಸಂಸ್ಥೆಯ ಕಲ್ಯಾಣ್ ವಿ, ಹಾಗೂ ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ ಸ್ಥಾನ ಪಡೆದಿದ್ದಾರೆ.