ಭುನವನೇಶ್ವರ್: ಒಡಿಶಾ ರಾಜ್ಯದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಶನಿವಾರ ಸಿಡಿಲು ಬಡಿದು 9 ಜನರು ಸಾವನ್ನಪ್ಪಿದ್ದಾರೆ. ಈ ಕುರಿತು ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳುವುದರೊಂದಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮಯೂರ್ಭಂಜ್ ಜಿಲ್ಲೆಯಲ್ಲಿ ಇಬ್ಬರು, ಬಾಲಸೋರ್ ಜಿಲ್ಲೆಯಲ್ಲಿ ಇಬ್ಬರು, ಭದ್ರಕ್ ಜಿಲ್ಲೆಯಲ್ಲಿ ಇಬ್ಬರು ಅಸುನೀಗಿದ್ದರೆ, ಕಿಯೋಂಝಾರ್, ಧೆಂಕಾನಾಲ್ ಮತ್ತು ಗಂಜಮ್ ಜಿಲ್ಲೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಅವಘಡಗಳಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಹಣವನ್ನು ತಲುಪಿಸುವಂತೆ ಸಿಎಂ ಮಾಝಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.