ಕರ್ನಾಟಕ

karnataka

ETV Bharat / bharat

ದೆಹಲಿಯ ಅಲಿಪುರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ: ಮೃತರ ಸಂಖ್ಯೆ 11ಕ್ಕೆ ಏರಿಕೆ - ಅಲಿಪುರ್ ಪ್ರದೇಶದ ಮಾರುಕಟ್ಟೆ

ದೆಹಲಿಯ ಅಲಿಪುರ್ ಪ್ರದೇಶದ ಮಾರುಕಟ್ಟೆಯಲ್ಲಿ ನಡೆದ ಭಾರಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಾಲ್ವರು ಗಾಯಗೊಂಡಿದ್ದಾರೆ.

fire broke out in Alipur market
ದೆಹಲಿಯ ಅಲಿಪುರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ: ಮೃತರ ಸಂಖ್ಯೆ 11ಕ್ಕೆ ಏರಿಕೆ

By ETV Bharat Karnataka Team

Published : Feb 16, 2024, 8:26 AM IST

Updated : Feb 16, 2024, 8:55 AM IST

ನವದೆಹಲಿ:ಉತ್ತರ ಹೊರ ಜಿಲ್ಲೆಯ ಅಲಿಪುರ ಪ್ರದೇಶದ ಮಾರುಕಟ್ಟೆಯಲ್ಲಿ ನಿನ್ನೆ (ಗುರುವಾರ) ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಸಮಯದಲ್ಲೇ ಬೆಂಕಿ ದೊಡ್ಡದಾಗಿ ಹಬ್ಬಿ, ದೊಡ್ಡ ಅನಾಹುತವನ್ನು ಸೃಷ್ಟಿ ಮಾಡಿದೆ. ಈ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಾಹಿತಿ ಪ್ರಕಾರ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಸುಮಾರು ಅಗ್ನಿಶಾಮಕ ದಳದ 22 ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ಬೆಂಕಿಯನ್ನು ಹತೋಟಿಗೆ ತರುವ ಕಾರ್ಯದಲ್ಲಿ ತೊಡಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಯು, ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸ್​ ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯನ್ನ ನಡೆಸಲಾಗುತ್ತಿದೆ. ಮೊದಲು ಈ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಸಮೀಪದ ಅಂಗಡಿಗಳಿಗೂ ವ್ಯಾಪಿಸಿದೆ. ರಾಸಾಯನಿಕ ವಸ್ತುಗಳಿಂದ ತಗುಲಿರುವ ಬೆಂಕಿಯು ವೇಗವಾಗಿ ಹರಡುವ ಮೂಲಕ ಇಡೀ ಪ್ರದೇಶವನ್ನು ವ್ಯಾಪಿಸಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಬೆಂಕಿ ತಗುಲಿರುವ ಬಗ್ಗೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದವು. ಆದರೆ, ಬೆಂಕಿ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆ 22 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಪ್ರಯಾಸ ಪಡಬೇಕಾಯಿತು. ಇದೇ ವೇಳೆಯಲ್ಲಿ, ಅಗ್ನಿಶಾಮಕ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಹತ್ತಿರದ ಕಾರ್ಖಾನೆಯಲ್ಲಿರುವ ಜನರನ್ನು ಸುರಕ್ಷಿತ ಸ್ಥಳದತ್ತ ಸ್ಥಳಾಂತರಿಸಲಾಗಿದೆ. ಸದ್ಯ ಬೆಂಕಿ ಅನಾಹುತಕ್ಕೆ ಕಾರಣ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇತ್ತೀಚಿನ ಅಗ್ನಿ ಅವಘಡ ಘಟನೆ:ಇದಕ್ಕೂ ಮುನ್ನ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಸಮಯದಲ್ಲೇ ಕಾರ್ಖಾನೆಯ ಮೊದಲ ಮತ್ತು ಎರಡನೇ ಮಹಡಿಗೆ ಬೆಂಕಿ ಆವರಿಸಿತ್ತು. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೆಲವು ಕಾರ್ಮಿಕರು ಒಳಗೆ ಕೆಲಸ ಮಾಡುತ್ತಿದ್ದರು. ಆದರೆ, ಅಗ್ನಿಶಾಮಕ ದಳದ ನೆರವಿನಿಂದ ಎಲ್ಲ ಕೆಲಸಗಾರರು ಹೊರಗೆ ಬಂದಿದ್ದರು.

ಇದನ್ನೂ ಓದಿ:ಅಸ್ಸಾಂನ ಗೋದಾಮಿ​ನಲ್ಲಿ ಅಗ್ನಿ ಅವಘಡ: ತಪ್ಪಿದ ಪ್ರಾಣಾಪಾಯ!

Last Updated : Feb 16, 2024, 8:55 AM IST

ABOUT THE AUTHOR

...view details