ಕೋಟಾ(ರಾಜಸ್ಥಾನ):ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ತನ್ನ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿಯ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಮಧ್ಯ ಪ್ರದೇಶದ ಅಣ್ಣುಪುರದ ನಿವಾಸಿ ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಏಪ್ರಿಲ್ನಿಂದ ಇಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ. ಮಧ್ಯರಾತ್ರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.