ಚೆನ್ನೈ(ತಮಿಳುನಾಡು):ನಟ ಹಾಗೂ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಕೇಂದ್ರ ಗೃಹ ಸಚಿವಾಲಯದಿಂದ ರಾಜಕಾರಣಿಗಳಿಗೆ ನೀಡುವ 'ವೈ' ವರ್ಗದಡಿಯಲ್ಲಿ ಭದ್ರತೆ ಒದಗಿಸಲಾಗಿದೆ. ಈ ವಿಚಾರವನ್ನು ವಿಜಯ್ ಪಕ್ಷದ ಕೇಂದ್ರ ಕಚೇರಿಯೂ ದೃಢಪಡಿಸಿದೆ.
ವಿಜಯ್ ಕಳೆದ ವರ್ಷ ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷ ಪ್ರಾರಂಭಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು, ಚುನಾವಣೆಗೆ ಮುಂಚಿತವಾಗಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವೈ ಕೆಟಗರಿ ಭದ್ರತೆ ಒದಗಿಸಲಾಗಿದೆ ಎಂದು ವರದಿಯಾಗಿದೆ.