ನವದೆಹಲಿ: ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಕತಾರ್ ದೊರೆ ತಮೀಮ್ ಬಿನ್ ಹಮದ್ ಅಲ್ ಥನಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ಗಾರ್ಡ್ ಆಫ್ ಆನರ್ ಮೂಲಕ ಸರ್ಕಾರಿ ಗೌರವಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಜೊತೆಯಲ್ಲಿ ಹಿರಿಯ ಸಚಿವರು ಕತಾರ್ ದೊರೆಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಕತಾರ್ ನಿಯೋಗವನ್ನು ರಾಷ್ಟ್ರಪತಿ ಮುರ್ಮು ಸ್ವಾಗತಿಸಿದರು.
ಭಾರತ ಭೇಟಿಗಾಗಿ ಸೋಮವಾರ ತಮೀಮ್ ಬಿನ್ ಹಮದ್ ಅಲ್ ಥಾನಿ ಭಾರತಕ್ಕೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ ತೆರಳಿ ಬರಮಾಡಿಕೊಂಡು ವಿಶೇಷ ಗೌರವ ನೀಡಿದ್ದರು. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಕೂಡ ಉಪಸ್ಥಿತರಿದ್ದರು. "ಕತಾರ್ ದೊರೆ ತನ್ನ ಸಹೋದರನಿದ್ದಂತೆ" ಎಂದು ಹೇಳಿದ್ದ ಪ್ರಧಾನಿ ಮೋದಿ, ಅವರ ಭೇಟಿ ಫಲಪ್ರದವಾಗಲಿ ಎಂದು ಹಾರೈಸಿದ್ದರು.