ಕರ್ನಾಟಕ

karnataka

ETV Bharat / bharat

ಆಂಧ್ರದಲ್ಲಿ ಚುನಾವಣೋತ್ತರ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ಚುನಾವಣಾ ಆಯೋಗ ಸಮನ್ಸ್​ - Andhra Poll Violence - ANDHRA POLL VIOLENCE

ಆಂಧ್ರಪ್ರದೇಶದ ತಿರುಪತಿ, ಪಲ್ನಾಡು, ಅನಂತಪುರ ಜಿಲ್ಲೆಯಲ್ಲಿ ಚುನಾವಣೋತ್ತರ ಹಿಂಸಾಚಾರ ಉಂಟಾಗಿದೆ. ಈ ಬಗ್ಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಕೇಂದ್ರ ಚುನಾವಣಾ ಆಯೋಗವು ಸಮನ್ಸ್​ ಜಾರಿ ಮಾಡಿದೆ.

Security personnel deployed during the polling in Tirupati, Andhra Pradesh on May 13.
ಆಂಧ್ರಪ್ರದೇಶದ ತಿರುಪತಿಯಲ್ಲಿ ಮೇ 13ರಂದು ನಡೆದ ಮತದಾನದ ವೇಳೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. (ANI Photo)

By ETV Bharat Karnataka Team

Published : May 15, 2024, 7:23 PM IST

ನವದೆಹಲಿ: ಆಂಧ್ರಪ್ರದೇಶದಲ್ಲಿ ಚುನಾವಣೋತ್ತರ ಹಿಂಸಾಚಾರ ನಡೆದಿದೆ. ಈ ಕುರಿತಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಕೇಂದ್ರ ಚುನಾವಣಾ ಆಯೋಗವು ಸಮನ್ಸ್​ ಜಾರಿ ಮಾಡಿದೆ. ಈ ಘಟನೆಗಳ ನಿಯಂತ್ರಿಸುವಲ್ಲಿ ಆಡಳಿತದ ವೈಫಲ್ಯ ಬಗ್ಗೆ ಖುದ್ದಾಗಿ ವಿವರಿಸುವಂತೆ ಇಬ್ಬರೂ ಉನ್ನತ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಸೋಮವಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯು ಏಕಕಾಲಕ್ಕೆ ಜರುಗಿದೆ. ಕೆಲವು ಭಾಗಗಳಲ್ಲಿ ಚುನಾವಣೋತ್ತರ ಭಾರಿ ಹಿಂಸಾಚಾರದ ಬಗ್ಗೆ ಮಂಗಳವಾರ ವರದಿಯಾಗಿದೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಮತ್ತು ಪ್ರತಿಪಕ್ಷ ಟಿಡಿಪಿ ನಾಯಕರು ಪರಸ್ಪರ ಆರೋಪ - ಪ್ರತ್ಯಾರೋಪಗಳನ್ನು ಮಾಡಿದ್ದಾರೆ.

ಇದರ ಬೆನ್ನಲ್ಲೇ ಹಿಂಸಾಚಾರದ ಬಗ್ಗೆ ಚುನಾವಣಾ ಆಯೋಗವು ಗಮನ ಹರಿಸಿದೆ. ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ರಾಜ್ಯ ಸರ್ಕಾರಕ್ಕೆ ನೆನಪಿಸಿರುವ ಆಯೋಗವು, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಜವಾಹರ್ ರೆಡ್ಡಿ ಮತ್ತು ಡಿಜಿಪಿ ಹರೀಶ್ ಕುಮಾರ್ ಗುಪ್ತಾ ಅವರಿಗೆ ಸೂಚಿಸಿದೆ. ಜೊತೆಗೆ ಈ ಚುನಾವಣೋತ್ತರ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಆಡಳಿತ ವೈಫಲ್ಯ ಉಂಟಾಗಿದೆ. ಇದಕ್ಕೆ ಕಾರಣಗಳನ್ನು ಖುದ್ದಾಗಿ ಸಲ್ಲಿಸಬೇಕು ಎಂದು ತಾಕೀತು ಮಾಡಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂದು ಆಯೋಗವು ಪದೇ ಪದೆ ಒತ್ತಿ ಹೇಳುತ್ತಿದೆ. ಲೋಕಸಭೆ ಚುನಾವಣೆ ಘೋಷಣೆಯಾದಾಗಿನಿಂದ ಚುನಾವಣೆಯನ್ನು ಶಾಂತಿಯುತ ಮತ್ತು ಹಿಂಸಾಚಾರ ಮುಕ್ತವಾಗಿ ನಡೆಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದರಿಂದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಚುನಾವಣಾ ಆಯೋಗಕ್ಕೆ ವಿವರಣೆ ನೀಡಲು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ತಿರುಪತಿಯ ಶ್ರೀಪದ್ಮಾವತಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆಸಿದೆ. ಇವಿಎಂ ಇಟ್ಟಿರುವ ಸ್ಟ್ರಾಂಗ್ ರೂಂ ಪರಿಶೀಲನೆಗೆ ಬಂದಿದ್ದ ಚಂದ್ರಗಿರಿ ಟಿಡಿಪಿ ಅಭ್ಯರ್ಥಿ ಪುಲಿವರ್ತಿ ನಾನಿ ಮೇಲೆ ದಾಳಿಯ ಯತ್ನ ನಡೆದಿದೆ. ವೈಎಸ್​ಆರ್​ಸಿ​ಪಿ ಶಾಸಕ ಚೇವಿರೆಡ್ಡಿ ಭಾಸ್ಕರ ರೆಡ್ಡಿ ಅವರ ಪುತ್ರ ಹಾಗೂ ಪಕ್ಷದ ಹಾಲಿ ಅಭ್ಯರ್ಥಿ ಮೋಹಿತ್ ರೆಡ್ಡಿ ಅವರ ಬೆಂಬಲಿಗರು ಗುದ್ದಲಿ, ದೊಣ್ಣೆ, ಕಲ್ಲು, ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಪಲ್ನಾಡು ಜಿಲ್ಲೆಯಲ್ಲಿ ಕಾರಿಗೆ ಯಾರೋ ಕಲ್ಲು ಎಸೆದ ಘಟನೆಯಿಂದ ಟಿಡಿಪಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಅನಂತಪುರ ಜಿಲ್ಲೆಯ ತಾಡಿಪತ್ರಿಯಲ್ಲೂ ರಣರಂಗ ಸೃಷ್ಟಿಸಲಾಗಿದೆ. ಟಿಡಿಪಿ ಏಜೆಂಟರ ಮೇಲೆ ವೈಎಸ್​ಆರ್​ಸಿ​ಪಿ ಏಜೆಂಟರು ಹಲ್ಲೆ ನಡೆಸಿದ್ದಾರೆ. ಬಳಿಕ ಕೇಂದ್ರ ಪಡೆಗಳು ಸ್ಥಳಕ್ಕಾಗಮಿಸಿ ಗಲಭೆಕೋರರನ್ನು ಚದುರಿಸಿವೆ.

ಇದನ್ನೂ ಓದಿ:ಬೆಂಗಳೂರು, ದೆಹಲಿ, ಜೈಪುರದ ನಂತರ ಕಾನ್ಪುರದ ಶಾಲೆಗಳಿಗೂ ಬಾಂಬ್ ಬೆದರಿಕೆ ಇಮೇಲ್‌ ಸಂದೇಶ

ABOUT THE AUTHOR

...view details