ಹೈದರಾಬಾದ್:ಕೋಲ್ಕತ್ತಾ ವಿಮಾನ ನಿಲ್ದಾಣದ ರೆಸ್ಟೋರೆಂಟ್‌ನಲ್ಲಿ ಚಹಾದ ಬೆಲೆ 340 ರೂಪಾಯಿ ಇದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಶುಕ್ರವಾರ ಹೇಳಿದ್ದಾರೆ. "ಪಶ್ಚಿಮ ಬಂಗಾಳದಲ್ಲಿ ತಮಿಳುನಾಡಿಗಿಂತ ಹಣದುಬ್ಬರ ಹೆಚ್ಚಾಗಿದೆ" ಎಂದು ತಮ್ಮ ಎಕ್ಸ್ ಹ್ಯಾಂಡಲ್ ಪೋಸ್ಟ್ ಮೂಲಕ ಹೇಳಿದ್ದಾರೆ.
"ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಿಸಿನೀರು ಮತ್ತು ಟೀ ಬ್ಯಾಗ್‌ನಿಂದ ಮಾಡಿದ ಚಹಾದ ಬೆಲೆ 340 ರೂಪಾಯಿ ಎಂಬ ವಿಚಾರವನ್ನು ನಾನು ತಿಳಿಸಲು ಬಯಸುತ್ತಿದ್ದೇನೆ’’ ಎಂದು ರಾಜ್ಯಸಭಾ ಸದಸ್ಯರಾಗಿರುವ ಚಿದಂಬರಂ, ತಮ್ಮ ಅಧಿಕೃತ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಕೇಂದ್ರದ ಮಾಜಿ ಗೃಹ ಸಚಿವರು ಆಗಿರುವ ಅವರು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾರಾಟ ಟೀ ಬೆಲೆಯಲ್ಲಿ ಭಾರಿ ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ ಬಳಿಕ ಎಚ್ಚೆತ್ತುಕೊಂಡ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಂಡಿತ್ತು ಎಂದು ನೆನಪಿಸಿಕೊಂಡಿದ್ದಾರೆ.