ಶ್ರೀನಗರ:ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ರಾತ್ರಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಜತೆ ಸಂಬಂಧ ಹೊಂದಿದ್ದ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.
ಪೊಲೀಸರ ಹೇಳಿಕೆಯ ಪ್ರಕಾರ, ಶ್ರೀನಗರ ಪೊಲೀಸರ ಜತೆಗೆ ರಾಷ್ಟ್ರೀಯ ರೈಫಲ್ಸ್, ವ್ಯಾಲಿ QRT (Quick Reaction Team) ಮತ್ತು ಸಿಆರ್ಪಿಎಫ್ ಸಿಬ್ಬಂದಿ ಒಳಗೊಂಡ ಜಂಟಿ ಮೊಬೈಲ್ ವಾಹನ ಚೆಕ್ ಪೋಸ್ಟ್ (MVCP) ಶನಿವಾರ ಸಂಜೆ ನೌಗಾಮ್ ವ್ಯಾಪ್ತಿಯಲ್ಲಿರುವ ಕೆನಿಹಮಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ.
ಈ ಸಂದರ್ಭದಲ್ಲಿ ಬಿಳಿ ಬಣ್ಣದ ಆಲ್ಟೊ ವಾಹನದ ಮೇಲೆ ಅನುಮಾನ ಮೂಡಿದ್ದು, ಪೊಲೀಸ್ ತಂಡ ಕಾರು ತಡೆದಿದೆ. ವಾಹನದಲ್ಲಿದ್ದವರನ್ನು ಮೊಹಮ್ಮದ್ ಯಾಸೀನ್ ಭಟ್, ಶೆರಾಜ್ ಅಹ್ಮದ್ ರಾಥರ್, ಗುಲಾಮ್ ಹಸನ್ ಖಾಂಡೆ ಮತ್ತು ಇಮ್ತಿಯಾಜ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಶ್ರೀನಗರ ಮತ್ತು ಸುತ್ತಮುತ್ತಲಿನ ವಿವಿಧ ಪ್ರದೇಶಗಳ ನಿವಾಸಿಗಳಾಗಿದ್ದಾರೆ.