ನವದೆಹಲಿ:ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರು ಘೋಷಣೆಯಾಗಿರುವ ಬೆನ್ನಲ್ಲೇ, ಹೊಸ ಸಂಪುಟದಲ್ಲಿ ಯಾರ್ಯಾರಿಗೆ ಸ್ಥಾನ ದೊರೆಯಲಿದೆ ಎಂಬ ಚರ್ಚೆ ಶುರುವಾಗಲಿದೆ. ಸೆಪ್ಟೆಂಬರ್ 21ರಂದು ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಅಂದು ನೂತನ ಸಚಿವರಾಗಿ ಮುಖೇಶ್ ಅಹ್ಲಾವತ್ ಸಿಎಂ ಜತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಲ್ತಾನಪುರಿಯ ಶಾಸಕರಾಗಿರುವ ಅವರು, ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ್ದಾರೆ.
ಸೆಪ್ಟೆಂಬರ್ 21 ರಂದು ಅತಿಶಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ಸಿಎಂ ಅತಿಶಿ ಜತೆ ಇತರ ಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಪಕ್ಷವು ಹೇಳಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಅಂದರೆ ಮಂಗಳವಾರ ಅತಿಶಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದರು. ಮಂಗಳವಾರ ಸಂಜೆ ರಾಜನಿವಾಸ್ ತಲುಪಿದ ಕೇಜ್ರಿವಾಲ್ ಅವರು ಎಲ್‌ಜಿಗೆ ರಾಜೀನಾಮೆ ಸಲ್ಲಿಸಿದರು. ಈ ಸಮಯದಲ್ಲಿ, ಅತಿಶಿ ಅವರೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಕೂಡಾ ಮಂಡಿಸಿದ್ದರು.
ಲೆಫ್ಟಿನೆಂಟ್ ಗವರ್ನರ್ ಅವರು ಬುಧವಾರ ರಾಷ್ಟ್ರಪತಿಗಳ ಅನುಮೋದನೆಗಾಗಿ ಎರಡೂ ಪ್ರಸ್ತಾವನೆಗಳನ್ನು ಕಳುಹಿಸಿದ್ದಾರೆ. ಇದರಲ್ಲಿ ಸೆಪ್ಟೆಂಬರ್ 21 ರಂದು ಅತಿಶಿ ಅವರಿಗೆ ಪ್ರಮಾಣ ವಚನ ಬೋಧಿಸಲು ಎಲ್‌ಜಿ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಕಡತವನ್ನು ಕೇಂದ್ರ ಗೃಹ ಸಚಿವಾಲಯಕ್ಕೂ ಕಳುಹಿಸಲಾಗಿದೆ.
ಅತಿಶಿ ಅವರೊಂದಿಗೆ ಈ 5 ಸಂಭಾವ್ಯ ಸಚಿವರು ಪ್ರಮಾಣ ವಚನ ಸ್ವೀಕಾರ