ಕರ್ನಾಟಕ

karnataka

ETV Bharat / bharat

ತಮಿಳರ ವಿರುದ್ಧದ ಹೇಳಿಕೆ ಪ್ರಕರಣ: ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ - Shobha Karandlaje

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ತಮಿಳರ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಪ್ರಕರಣವನ್ನು ಮದ್ರಾಸ್​ ಹೈಕೋರ್ಟ್​ ಇಂದು ರದ್ದುಗೊಳಿಸಿ ಆದೇಶಿಸಿದೆ.

Union Minister Shobha Karandlaje
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (ETV Bharat)

By ETV Bharat Karnataka Team

Published : Sep 5, 2024, 10:15 PM IST

ಚೆನ್ನೈ (ತಮಿಳುನಾಡು):ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ಜನರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

ಈ ಕುರಿತು ಡಿಎಂಕೆಯ ತ್ಯಾಗರಾಜನ್ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಎರಡು ಗುಂಪುಗಳ ನಡುವೆ ಗಲಭೆ ಎಬ್ಬಿಸುವುದು, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿತ್ತು.

ಈ ನಡುವೆ ಶೋಭಾ ಕರಂದ್ಲಾಜೆ ಪರವಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ಬಾರಿ ಈ ಪ್ರಕರಣವು ವಿಚಾರಣೆಗೆ ಬಂದಾಗ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ತಮಿಳು ಜನರ ವಿರುದ್ಧದ ಹೇಳಿಕೆಗೆ ಕ್ಷಮೆಯಾಚಿಸುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಡೆಯಿಂದ ಅಫಿಡವಿಟ್ ಸಲ್ಲಿಸಲಾಗಿತ್ತು.

ಬಾಂಬ್ ಸ್ಫೋಟದಲ್ಲಿ ತಮಿಳರು ಭಾಗಿಯಾಗಿದ್ದಾರೆ ಎಂಬ ರೀತಿಯಲ್ಲಿ ನೀಡಿದ ಹೇಳಿಕೆಯು ತಮಿಳುನಾಡಿನ ಜನರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಹೇಳಲಾಗಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಮೇಲಾಗಿ, ಅವರ ಹೇಳಿಕೆ ತಮಿಳು ಜನರಿಗೆ ನೋವನ್ನುಂಟು ಮಾಡಿದೆ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ. ತಮಿಳರ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿತ್ತು.

ಈ ಪ್ರಕರಣ ಇಂದು ಮತ್ತೆ ನ್ಯಾಯಮೂರ್ತಿ ಜಿ. ಜಯಚಂದ್ರ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆಗ, ತಮಿಳುನಾಡಿನ ಜನತೆಯ ಪರವಾಗಿ ಶೋಭಾ ಕರಂದ್ಲಾಜೆ ಅವರ ಕ್ಷಮೆಯಾಚನೆಯನ್ನು ತಮಿಳುನಾಡು ಸರ್ಕಾರ ಸ್ವೀಕರಿಸುತ್ತದೆ ಎಂದು ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ. ಎಸ್ ರಾಮನ್ ಹೇಳಿದ್ದಾರೆ.

ಇದನ್ನು ಒಪ್ಪಿಕೊಂಡ ನ್ಯಾಯಮೂರ್ತಿಗಳು ಕೇಂದ್ರದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದರು.

ಇದನ್ನೂ ಓದಿ :ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ತಮಿಳರ ಕ್ಷಮೆಯಾಚಿಸಿದ ಸಚಿವೆ ಶೋಭಾ ಕರಂದ್ಲಾಜೆ - SHOBHA KARANDLAJE APOLOGY

ABOUT THE AUTHOR

...view details