ಪಾಟ್ನಾ (ಬಿಹಾರ): ಇಲ್ಲಿನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (ಎನ್ಐಟಿ)ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಿಳಾ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪಾಟ್ನಾದ ಹೊರವಲಯದಲ್ಲಿರುವ ಹಾಸ್ಟೆಲ್ ಕೋಣೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವನ್ನಪ್ಪಿದ ವಿದ್ಯಾರ್ಥಿನಿ ಆಂಧ್ರ ಪ್ರದೇಶದ ಮೂಲದವಳಾಗಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಯುವತಿ ಎರಡನೇ ವರ್ಷದ ಕಂಪ್ಯೂಟರ್ ಎಲೆಕ್ಟ್ರಾನಿಕ್ಸ್ ಬಿಟೆಕ್ ವ್ಯಾಸಂಗ ಮಾಡುತ್ತಿದ್ದಳು. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರಿಗೆ ಈ ಸಂಬಂಧ ರಾತ್ರಿ 10.15ಕ್ಕೆ ಮಾಹಿತಿ ಲಭ್ಯವಾಗಿತ್ತು. ತಕ್ಷಣಕ್ಕೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿ ದೇಹವನ್ನು ಕೆಳಗಿಳಿಸಿ, ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಯುವತಿ ಆದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದರು ಪೊಲೀಸರು ಮಾಹಿತಿ ನೀಡಿದರು.
ಯುವತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ವರದಿಯಲ್ಲಿ ಆತ್ಮಹತ್ಯೆಯಿಂದ ಸಾವು ಎಂಬುದು ದೃಢಪಟ್ಟಿದ್ದು, ಯಾವ ಉದ್ದೇಶದಿಂದ ಈ ರೀತಿ ನಿರ್ಧಾರವವನ್ನು ಯುವತಿ ಕೈಗೊಂಡಳು ಎಂಬುದು ಮಾತ್ರ ತಿಳಿದಿಲ್ಲ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರವನ್ನು ವಶಕ್ಕೆ ಪಡೆಯಲಾಗಿದ್ದು, ಎಲ್ಲಾ ರೀತಿಯ ತನಿಖೆ ನಡೆಸಲಾಗುವುದು. ಯುವತಿ ಸಾವಿಗೆ ನಿಖರ ಕಾರಣ ಪತ್ತೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು, ಯುವತಿ ಆತ್ಮಹತ್ಯೆ ವಿಷಯ ಹರಡುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಜಮಾಯಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ: ಆತ್ಮಹತ್ಯೆಯಂತಹ ಯೋಚನೆ ಹೊಂದಿದಲ್ಲಿ ಅಥವಾ ಈ ವಿಚಾರದಲ್ಲಿ ಸ್ನೇಹಿತರ ಬಗ್ಗೆ ಚಿಂತೆಗೆ ಒಳಗಾಗಿದ್ದರೆ ಅಥವಾ ಯಾವುದೇ ಭಾವನಾತ್ಮಕ ಬೆಂಬಲ ಬೇಕು ಎಂದು ಅನಿಸಿದ್ದಲ್ಲಿ ನಿಮಗೆ ಸಾಂತ್ವನ ನೀಡಲು ಸದಾ ಒಬ್ಬರು ಇದ್ದಾರೆ ಎಂಬುದನ್ನು ಮರೆಯಬೇಡಿ. ಇದಕ್ಕಾಗಿ ಆರೋಗ್ಯ ಇಲಾಖೆಯ ಟೆಲಿ ಮಾನಸ್ ಟೋಲ್ ಫ್ರೀ ಸಂಖ್ಯೆ 14416 ಅಥವಾ 1-800-891-4416 ಕರೆ ಮಾಡಬಹುದು. ನಿಮ್ಮದೇ ಭಾಷೆಯಲ್ಲಿ ಅವರು ವ್ಯವಹರಿಸಲಿದ್ದಾರೆ.
ಇದನ್ನೂ ಓದಿ: ಕೃತಜ್ಞತೆಗೂ ಒಂದು ದಿನ ಮುಡಿಪು: ಇವರಿಗೆಲ್ಲ ಕೃತಜ್ಞರಾಗಿರಬೇಕೆಂದ್ರೆ ಹೀಗೆ ಮಾಡಿ!