ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಇಲ್ಲಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 16 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿಯನ್ನು ಇಂದು ಪ್ರಕಟಿಸಿತು. ಇದು ಪಕ್ಷದ ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಈ ಹಿಂದೆ, ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕಾರಣಾಂತರಗಳಿಂದ ಹಿಂತೆಗೆದುಕೊಳ್ಳಲಾಯಿತು. ಈಗ ಮತ್ತೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಜಮ್ಮುವಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿಂದು ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಜಮ್ಮುವಿನ ಪಕ್ಷದ ಕಚೇರಿಯ ಹೊರಗೆ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಹಿರಿಯರು ಮತ್ತು ಅರ್ಹರಿಗೆ ಟಿಕೆಟ್ ನೀಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ನಾಯಕರೊಬ್ಬರು ಮಾತನಾಡಿ, ‘‘ನನಗೆ ಅನ್ಯಾಯವಾಗಿದೆ. ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ ಅದರ ಪರಿಣಾಮವನ್ನು ಬಿಜೆಪಿ ಎದುರಿಸಬೇಕಾಗುತ್ತದೆ. ನಾವು ಪಕ್ಷದಲ್ಲಿದ್ದುಕೊಂಡೆ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದ್ದಾರೆ.