ಕರ್ನಾಟಕ

karnataka

ETV Bharat / bharat

ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಧರ್ಮೇಂದ್ರ ಪ್ರಧಾನ್ - DHARMENDRA PRADHAN

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು 2026ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

Union Minister Dharmendra Pradhan
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (ETV Bharat (ಸಂಗ್ರಹ ಚಿತ್ರ))

By ETV Bharat Karnataka Team

Published : Feb 9, 2025, 5:32 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): 2026ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 2019 ರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮತಗಳ ಪ್ರಮಾಣವು ಶೇಕಡಾ 30-40 ರಷ್ಟಿದೆ ಮತ್ತು ಪಕ್ಷವು ಶೇಕಡಾ 10 ರಷ್ಟು ಹೆಚ್ಚು ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುತ್ತದೆ ಎಂದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸೋಲು ಬಿಜೆಪಿ ಮೇಲಿನ ಜನರ ಅಗಾಧ ನಂಬಿಕೆ ಮತ್ತು "ಭ್ರಷ್ಟ" ಅರವಿಂದ್ ಕೇಜ್ರಿವಾಲ್ ಸರ್ಕಾರದ ದೂರ ಇರಿಸಿರುವುದನ್ನು ತೋರಿಸಿದೆ ಎಂದು ಹೇಳಿದ ಪ್ರಧಾನ್, 2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಜ್ಯದ 42 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗಳಿಸುವ ಮೂಲಕ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು.

"ನಾವು 2021ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಮತ್ತು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ 12 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದೇವೆ. 2019 ರಿಂದ ಬಿಜೆಪಿಯ ಮತದಾನದ ಶೇಕಡಾವಾರು 30-40 ರಷ್ಟಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲು ನಮಗೆ ಕೇವಲ ಶೇಕಡಾ 10 ರಷ್ಟು ಮತಗಳು ಬೇಕಾಗುತ್ತವೆ. 2026 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕೇಂದ್ರ ಪೆಟ್ರೋಲಿಯಂ ಸಚಿವನಾಗಿದ್ದಾಗ ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳವನ್ನು ಸಂಪರ್ಕಿಸುವ 710 ಕಿಲೋಮೀಟರ್​ ಅನಿಲ ಪೈಪ್‌ಲೈನ್ ಸ್ಥಾಪಿಸಲು ಬಯಸಿದ್ದೆ ಎಂದು ಹೇಳಿದರು.

ಟಿಎಂಸಿ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಪೈಪ್‌ಲೈನ್ ವಿಸ್ತರಣೆಗೆ ಭೂಮಿ ನೀಡಿಲ್ಲ ಮತ್ತು ರೈಲ್ವೆ ಯೋಜನೆಗಳನ್ನು ಜಾರಿಗೆ ತರಲು ಮತ್ತು ರಾಜ್ಯದಲ್ಲಿ ಹೆಚ್ಚಿನ ನವೋದಯ ಶಾಲೆಗಳನ್ನು ಸ್ಥಾಪಿಸಲು ಕೇಂದ್ರದೊಂದಿಗೆ ಸಹಕರಿಸುತ್ತಿಲ್ಲ ಎಂದು ಪ್ರಧಾನ್ ಆರೋಪಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಉಪಕುಲಪತಿಗಳ ನೇಮಕಾತಿ ಸೇರಿದಂತೆ ಸರ್ಕಾರಿ-ಚಾಲಿತ ವಿಶ್ವವಿದ್ಯಾಲಯಗಳ ವ್ಯವಹಾರಗಳನ್ನು ನಡೆಸುವ ಅಧಿಕಾರವನ್ನು ಕುಲಪತಿಗಳಿಗೆ ನೀಡಿದ ಅದರ ಕರಡು ಮಾರ್ಗಸೂಚಿಗಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗವನ್ನು (ಯುಜಿಸಿ) ರಾಜ್ಯ ಸರ್ಕಾರವು ಸುಮ್ಮನೇ ಟೀಕಿಸುತ್ತಿದೆ ಎಂದು ಪ್ರಧಾನ್ ಕಿಡಿಕಾರಿದರು.

"ಯುಜಿಸಿ ರಾಜಕೀಯ ಪಕ್ಷವಲ್ಲ.. ಇದು ಸ್ವಾಯತ್ತ ಸಂಸ್ಥೆಯಾಗಿದ್ದು, ಅದರ ಪಾತ್ರಗಳು ಮತ್ತು ಪ್ರಾಮುಖ್ಯತೆಯನ್ನು ಈ ಹಿಂದೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಆದರೆ, ಪಶ್ಚಿಮ ಬಂಗಾಳದ ಟಿಎಂಸಿ ಆಡಳಿತದ ಸರ್ಕಾರವು ರಾಜ್ಯದ ಅಧಿಕಾರವನ್ನು ದುರ್ಬಲಗೊಳಿಸಲು ಮುಂದಾಗಿದೆ. ರಾಜ್ಯ ಶಿಕ್ಷಣ ಸಚಿವರು ಯುಜಿಸಿ ಮತ್ತು ರಾಜ್ಯಪಾಲರನ್ನು ನಿಯಮಿತವಾಗಿ ಟೀಕಿಸುತ್ತಿದ್ದಾರೆ " ಎಂದು ಅವರು ದೂರಿದರು.

ಇದನ್ನೂ ಓದಿ :ಎದ್ದಲ್ಲೇ ಬಿದ್ದ ಆಮ್​ ಆದ್ಮಿ : ದೆಹಲಿಯಲ್ಲಿ ಹುಟ್ಟಿದ ಪಕ್ಷಕ್ಕೆ ಅಲ್ಲೇ ಸೋಲು, ಪಂಜಾಬಲ್ಲಿ ಮಾತ್ರ ಅಧಿಕಾರ - AAP FALL IN BORN STATE

ABOUT THE AUTHOR

...view details