ಕರ್ನಾಟಕ

karnataka

ETV Bharat / bharat

ದೆಹಲಿ-ವಾರಣಾಸಿ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ನಿರ್ಗಮನ ದ್ವಾರದಿಂದ ಹೊರಬಂದ ಪ್ರಯಾಣಿಕರು! - Bomb Threat To Flight

ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ವಿಮಾನವನ್ನು ರನ್‌ವೇಯಲ್ಲಿ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

Varanasi bound flight  Delhi airport  passengers evacuated  Bomb threat
ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹೊರಬಂದ ಪ್ರಯಾಣಿಕರು (ANI)

By PTI

Published : May 28, 2024, 9:12 AM IST

Updated : May 28, 2024, 9:20 AM IST

ನವದೆಹಲಿ:ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಉಂಟಾಯಿತು. ವಿಷಯ ತಿಳಿದ ತಕ್ಷಣ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನ ಬಾಗಿಲುಗಳ ಮೂಲಕ ಸುರಕ್ಷಿತವಾಗಿ ಕೆಳಗಿಳಿಸಿದರು ಎಂದು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹುಸಿ ಬಾಂಬ್ ಬೆದರಿಕೆ: ದೆಹಲಿಯ ಟಿ2 (ಟರ್ಮಿನಲ್‌)ನಿಂದ ಈ ವಿಮಾನ ಬೆಳಿಗ್ಗೆ 5.30ರ ಸುಮಾರಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗ ಬೆದರಿಕೆ ಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಡಲೇ ಸ್ಥಳಾಂತರಿಸಲಾಯಿತು. ಬಳಿಕ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕೊಂಡೊಯ್ಯಲಾಯಿತು. ಬಾಂಬ್ ಸ್ಕ್ವಾಡ್ ಮತ್ತು ಸಿಐಎಸ್‌ಎಫ್ ತಂಡವನ್ನು ಸ್ಥಳಕ್ಕೆ ಕರೆಸಿ ಶೋಧ ನಡೆಸಿದ್ದು, ಹುಸಿ ಬೆದರಿಕೆ ಎಂಬುದು ಖಚಿತಯಿತು ಎಂದು ಅಧಿಕಾರಿಗಳು ತಿಳಿಸಿದರು.

ಈ ಬಗ್ಗೆ ಸಿಐಎಸ್‌ಎಫ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ''ವಿಮಾನದಲ್ಲಿ ಟಿಶ್ಯೂ ಪೇಪರ್‌ ಮೇಲೆ ಬಾಂಬ್ ಇಟ್ಟಿರುವ ಬಗ್ಗೆ ಬರೆದಿರುವುದು ಪತ್ತೆಯಾಗಿದೆ. ತನಿಖೆ ನಡೆಸಿದಾಗ ಅಂಥದ್ದೇನೂ ಇಲ್ಲ ಎಂಬುದು ಗೊತ್ತಾಯಿತು'' ಎಂದರು.

ಇದನ್ನೂ ಓದಿ:ರಾಹುಲ್‌ ಗಾಂಧಿ ಇದ್ದ ವೇದಿಕೆ ಏಕಾಏಕಿ ಕುಸಿತ: ಕೆಲಕಾಲ ಗೊಂದಲ ಸೃಷ್ಟಿ - Rahul Gandhi Escapes Unhurt

Last Updated : May 28, 2024, 9:20 AM IST

ABOUT THE AUTHOR

...view details