ತಿರುವನಂತಪುರ (ಕೇರಳ):ಬಾಂಬ್ ಬೆದರಿಕೆಯ ಹಿನ್ನೆಲೆ ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.10ಕ್ಕೆ ಇಳಿಯಬೇಕಿದ್ದ ವಿಮಾನ ಬಾಂಬ್ ಬೆದರಿಕೆಯಿಂದಾಗಿ 7.50ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಿದೆ.
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ - Bomb Threat - BOMB THREAT
ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈ-ತಿರುವನಂತಪುರ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ (ETV Bharat)
By PTI
Published : Aug 22, 2024, 9:38 AM IST
ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಯಿತು. ನಂತರ ವಿವರವಾದ ತಪಾಸಣೆ ನಡೆಸಲಾಯಿತು. ಬಾಂಬ್ ಬೆದರಿಕೆಯ ಬಗ್ಗೆ ವಿಮಾನದ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೊಂದು ನಕಲಿ ಸಂದೇಶ ಎಂಬ ಸೂಚನೆ ಸಿಕ್ಕಿದ್ದು, ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.