ಪುಣೆ(ಮಹಾರಾಷ್ಟ್ರ):ಕ್ರಿಕೆಟ್ ಆಡುತ್ತಿದ್ದಾಗ ಜನನಾಂಗಕ್ಕೆ ಚೆಂಡು ಬಡಿದು ಬಾಲಕ ಸಾವನ್ನಪ್ಪಿರುವ ಘಟನೆ ಪುಣೆಯ ಲೋಹ್‌ಗಾಂವ್‌ನಲ್ಲಿ ಕಳೆದ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಂಭು ಮೃತಪಟ್ಟ ಬಾಲಕ. ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಸಂಜೆಯ ವೇಳೆ ಶಂಭು ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ. ಈ ಸಂದರ್ಭದಲ್ಲಿ ಚೆಂಡು ತೊಡೆಸಂದಿಗೆ ಬಡಿದಿತ್ತು.
ಘಟನೆಯ ನಂತರ ಬಾಲಕ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪುಣೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.