ರಾಯ್‌ಪುರ (ಛತ್ತೀಸ್‌ಗಢ):ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಛತ್ತೀಸ್‌ಗಢದ ಸಶಸ್ತ್ರ ಪಡೆಯ (ಸಿಎಎಫ್) ಅಧಿಕಾರಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಿಲ್ ಸಿಂಗ್ ಗಹರ್ವಾರ್ (45 ವರ್ಷ) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ.
ನವರಾಯಪುರದ ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಎಎಫ್‌ನ 14ನೇ ಬೆಟಾಲಿಯನ್‌ನ ಅನಿಲ್ ಸಿಂಗ್ ಗಹರ್ವಾರ್, ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾತ್ರಿ 8 ಗಂಟೆಯ ಸುಮಾರಿಗೆ ಬ್ಯಾರಕ್‌ನಿಂದ ಗುಂಡಿನ ಸದ್ದು ಕೇಳಿ ಬಂದಿತು. ಗುಂಡಿನ ಸದ್ದು ಕೇಳುತ್ತಿದ್ದಂತೆ ಆತನ ಸಹೋದ್ಯೋಗಿಗಳು ಕೊಠಡಿಗೆ ಬಂದು ನೋಡಿದಾಗ ಅನಿಲ್ ಸಿಂಗ್ ಶವವಾಗಿ ಬಿದ್ದಿದ್ದ. ನಂತರ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದ ನಿವಾಸಿಯಾಗಿದ್ದ ಅನಿಲ್ ಸಿಂಗ್, ಸಿಎಎಫ್‌ನ 14ನೇ ಬೆಟಾಲಿಯನ್‌ನಲ್ಲಿ ಕಮಾಂಡರ್ ಆಗಿ ನಿಯೋಜಿಸಲ್ಪಟ್ಟಿದ್ದರು. ಅಧಿಕಾರಿಯ ಕುಟುಂಬ ದುರ್ಗ್ ಜಿಲ್ಲೆಯಲ್ಲಿ ನೆಲೆಸಿದೆ. ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ. ಅವರ ಕುಟುಂಬ ಇಲ್ಲಿಗೆ ಬಂದ ನಂತರ ಅವರ ಸಾವಿನ ಹಿಂದಿನ ನಿಜವಾದ ಕಾರಣ ತಿಳಿದು ಬರಲಿದೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದು:8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಕಾಲಿಗೆ ಗುಂಡು ಹೊಡೆದು ಆರೋಪಿ ಬಂಧನ - RAPE MURDER CASE
ಆತ್ಮಹತ್ಯೆ ಪರಿಹಾರವಲ್ಲ;ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ.