ಥಾಣೆ(ಮಹಾರಾಷ್ಟ್ರ):ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದು 10 ದಿನ ಕಳೆದರೂ ಸರ್ಕಾರ ರಚನೆ ವಿಷಯದಲ್ಲಿ 'ಮಹಾಯುತಿ' ಮೈತ್ರಿ ನಾಯಕರು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಈ ನಡುವೆ ದಿಢೀರ್ ಬೆಳವಣಿಗೆಯಲ್ಲಿ ಹಂಗಾಮಿ ಮುಖ್ಯಮಂತ್ರಿಯಾಗಿರುವ ಶಿವಸೇನಾ(ಶಿಂಧೆ ಬಣ) ಮುಖ್ಯಸ್ಥ ಏಕನಾಥ್ ಶಿಂಧೆ ಇಂದು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ತಪಾಸಣೆಯ ಬಳಿಕ ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅವರು ನೇರವಾಗಿ ತಮ್ಮ ನಿವಾಸಕ್ಕೆ ತೆರಳಿದ್ದಾರೆ. ಇಂದು ರಾತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆ, ಖಾತೆ ಮತ್ತು ಸಂಪುಟ ಹಂಚಿಕೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಿದ್ದಾರೆ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಟ್ ತಿಳಿಸಿದ್ದಾರೆ.