ಕರ್ನಾಟಕ

karnataka

ETV Bharat / bharat

ಡಿಕೆಶಿ ವಿರುದ್ಧದ ಸಿಬಿಐ ಕೇಸ್​: ಯತ್ನಾಳ್​​ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ - CASE AGAINST D K SHIVAKUMAR

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಇದ್ದ ಒಪ್ಪಿಗೆ ಹಿಂಪಡೆದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿ ಅರ್ಜಿಯನ್ನು ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿತು.

ಸುಪ್ರೀಂಕೋರ್ಟ್, ಡಿಕೆ ಶಿವಕುಮಾರ್​, ಬಸನಗೌಡ ಪಾಟೀಲ್​ ಯತ್ನಾಳ್​
ಸುಪ್ರೀಂಕೋರ್ಟ್, ಡಿಕೆ ಶಿವಕುಮಾರ್​, ಬಸನಗೌಡ ಪಾಟೀಲ್​ ಯತ್ನಾಳ್​ (ETV Bharat)

By ETV Bharat Karnataka Team

Published : Jan 29, 2025, 10:59 PM IST

ನವದೆಹಲಿ:ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಕುರಿತು ಸಿಬಿಐ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂದಕ್ಕೆ ತೆಗೆದುಕೊಂಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಡಿಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಯ ಒಪ್ಪಿಗೆಯನ್ನು ವಾಪಸ್​ ಪಡೆದಿದ್ದನ್ನು ಪ್ರಶ್ನಿಸಿದ್ದರ ಹಿಂದೆ ಯಾವ ರಾಜಕೀಯ ದುರುದ್ದೇಶವಿದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್​ ಮತ್ತು ಎನ್​ ಕೋಟೀಶ್ವರ್​ ಸಿಂಗ್​ ಅವರಿದ್ದ ಪ್ರಶ್ನಿಸಿದೆ.

ಮೇಲ್ಮನವಿ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರು, ರಾಜಕೀಯ ಲಾಭಕ್ಕಾಗಿ ನೀವು ಸುಪ್ರೀಂಕೋರ್ಟ್​ ಮುಂದೆ ಬಂದಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಶಾಸಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್ ಅವರು, ಇದು ರಾಜಕೀಯ ದ್ವೇಷದ ಪ್ರಕರಣವಲ್ಲ. ರಾಜ್ಯ ಸರ್ಕಾರ ಇನ್ನೂ ತನ್ನ ಪ್ರತಿ ಅಫಿಡವಿಟ್ ಸಲ್ಲಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವಿದೆ. ಡಿಸಿಎಂ ವಿರುದ್ಧದ ಪ್ರಕರಣವನ್ನು ಸರ್ಕಾರವೇ ಹಿಂಪಡೆದಿದೆ ಎಂದು ಹೇಳಿದರು.

ಸಿಬಿಐ ಪರ ವಾದ ಮಂಡಿಸಿದ ವಕೀಲ ಕನು ಅಗರ್ವಾಲ್, ಪ್ರಕರಣದಲ್ಲಿ ಅರ್ಜಿ ಸಲ್ಲಿಸಲು ತನಿಖಾ ಸಂಸ್ಥೆಗೆ ನ್ಯಾಯಾಲಯ ಅನುಮತಿ ನೀಡಬಹುದು ಎಂದರು. ಸಿಬಿಐ ಹಾಗೂ ಡಿ.ಕೆ.ಶಿವಕುಮಾರ್​ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ ಕೋರ್ಟ್​ ಮಾರ್ಚ್​ 26 ಕ್ಕೆ ವಿಚಾರಣೆ ಮುಂದೂಡಿತು.

ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ಇದ್ದ ಒಪ್ಪಿಗೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರೂ, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಜನಾರ್ದನ ರೆಡ್ಡಿ ಚಪಲಕ್ಕೆ ಮಾತನಾಡುತ್ತಾರೆ, ನನ್ನ ಹೆಸರು ದುರ್ಬಳಕೆ ಮಾಡುತ್ತಿದ್ದಾರೆ: ಡಿಸಿಎಂ ಡಿಕೆಶಿ

ABOUT THE AUTHOR

...view details