ನವದೆಹಲಿ: ರಾಜ್ಯಗಳ ವಿಪತ್ತು ಪರಿಹಾರ ನಿಧಿ ಮತ್ತು ನೈಸರ್ಗಿಕ ವಿಪತ್ತು ನಿಭಾಯಿಸುವ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮಂಗಳವಾರ, 15 ರಾಜ್ಯಗಳಿಗೆ 1,000 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಕರ್ನಾಟಕಕ್ಕೆ 72 ಕೋಟಿ ರೂಪಾಯಿ: ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ 139 ಕೋಟಿ ರೂ, ಮಹಾರಾಷ್ಟ್ರಕ್ಕೆ 100 ಕೋಟಿ ರೂ, ಕರ್ನಾಟಕ ಮತ್ತು ಕೇರಳಕ್ಕೆ ತಲಾ 72 ಕೋಟಿ ರೂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ ರೂ, ಈಶಾನ್ಯ ರಾಜ್ಯದ 8 ಜಿಲ್ಲೆಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಾಕ್ಕೆ 378 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.