ಕರ್ನಾಟಕ

karnataka

ETV Bharat / bharat

ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ದಿನಾಂಕ ಮುಂದಕ್ಕೆ: ಜೂ.12ಕ್ಕೆ ಮುಹೂರ್ತ ಫಿಕ್ಸ್​ - naidu Oath ceremony - NAIDU OATH CEREMONY

ಚಂದ್ರಬಾಬು ನಾಯ್ಡು ಜೂನ್​ 12ಕ್ಕೆ ಆಂಧ್ರ ಪ್ರದೇಶದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು (ETV Bharat)

By ETV Bharat Karnataka Team

Published : Jun 6, 2024, 2:16 PM IST

ಹೈದರಾಬಾದ್​:ಆಂಧ್ರ ಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಭರ್ಜರಿ ಬುಹಮತ ಪಡೆಯುವುದರೊಂದಿಗೆ ಮತ್ತೆ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್​.12ರಂದು ಟಿಡಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

ಈ ಹಿಂದೆ ಜೂನ್ 9 ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿತ್ತು ಇದೀಗ ದಿನಾಂಕವನ್ನು ಮುಂದೂಡಲಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಕಾರಣ ಎಪಿ ಪ್ರಮಾಣ ವಚನ ದಿನಾಂಕದಲ್ಲಿ ಈ ಬದಲಾವಣೆ ಮಾಡಲಾಗಿದೆ.

ನಿನ್ನೆ ದಿನ ಪ್ರಧಾನಿ ಮೋದಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಸಲ್ಲಿಸಿದ್ದರು. ಮುರ್ಮು ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಹೊಸ ಸರ್ಕಾರ ರಚನೆ ಆಗುವವರೆಗೂ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ.

ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಬಹುಮತ ಪಡೆಯುವ ಮೂಲಕ ದಾಖಲೆ ಬರೆದಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದರಿಂದ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಮಹತ್ವದ ಕೊಡುಗೆ ನೀಡಲಿದೆ.

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಟಿಡಿಪಿ ಸ್ಪಷ್ಟ ಬಹುಮತ ಪಡೆದಿದೆ. 175 ಸ್ಥಾನಗಳ ಪೈಕಿ ಟಿಡಿಪಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಅಂತರವನ್ನು ದಾಟಿ ಜಯಭೇರಿ ಬಾರಿಸಿದೆ. ಅಲ್ಲದೇ ಟಿಡಿಪಿ ಮಿತ್ರಪಕ್ಷಗಳಾದ ಜನಸೇನೆ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೇ, ಬಿಜೆಪಿ ಎಂಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆಡಳಿತ ಪಕ್ಷ ವೈಎಸ್ಆರ್ ಕಾಂಗ್ರೆಸ್ ಕೇವಲ 11 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಹೀನಾಯ ಸೋಲು ಅನುಭವಿಸಿದೆ.

ಇದನ್ನೂ ಓದಿ:ಲೋಕ ಕದನದಲ್ಲಿ ಹಿನ್ನಡೆ: ಸರ್ಕಾರದ ಮಟ್ಟದಲ್ಲಿ ಬದಲಾವಣೆಗೆ ಸಿಎಂ ಯೋಗಿ ಚಿಂತನೆ - cm yogi meetings

ABOUT THE AUTHOR

...view details