ಕರ್ನಾಟಕ

karnataka

ETV Bharat / bharat

ಛತ್ತೀಸ್‌ಗಢದಲ್ಲಿ ಎನ್​ಕೌಂಟರ್: 3 ನಕ್ಸಲರ ಹತ್ಯೆ, ಶಸ್ತ್ರಾಸ್ತ್ರ ವಶ - NAXALITES ENCOUNTER

ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್​ನಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ.

ನಕ್ಸಲ್ ವಿರೋಧಿ ಕಾರ್ಯಾಚರಣೆ (ಸಂಗ್ರಹ ಚಿತ್ರ)
ನಕ್ಸಲ್ ವಿರೋಧಿ ಕಾರ್ಯಾಚರಣೆ (ಸಂಗ್ರಹ ಚಿತ್ರ) (IANS)

By ETV Bharat Karnataka Team

Published : Jan 12, 2025, 2:04 PM IST

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಗ್ಗೆ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ಆರಂಭವಾಯಿತು ಎಂದು ಬಸ್ತಾರ್ ವಲಯದ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಸುಂದರ್ ರಾಜ್ ಪಿ ಹೇಳಿದರು.

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಜಿಲ್ಲಾ ಪಡೆಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು. ಗುಂಡಿನ ಚಕಮಕಿ ನಿಂತ ನಂತರ ಸ್ವಯಂಚಾಲಿತ ಬಂದೂಕುಗಳು ಸೇರಿದಂತೆ ಇತರ ಬಂದೂಕುಗಳು ಮತ್ತು ಸ್ಫೋಟಕಗಳೊಂದಿಗೆ ಸಮವಸ್ತ್ರ ಧರಿಸಿದ ಮೂವರು ನಕ್ಸಲರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್​ಗಳಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ.

ನಕ್ಸಲ್‌ ನಿಗ್ರಹದಲ್ಲಿ ಮಹತ್ವದ ಬೆಳವಣಿಗೆಗಳು:

  • ನಾರಾಯಣಪುರ-ದಾಂತೇವಾಡ-ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್‌ನಲ್ಲಿ ಭದ್ರತಾ ಪಡೆಗಳು ಇದೇ ತಿಂಗಳಾರಂಭದಲ್ಲಿ ನಡೆಸಿದ ಮೂರು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಹತರಾಗಿದ್ದರು.
  • ಜನವರಿ 9ರಂದು ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್​ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದರು.
  • ಜನವರಿ 3ರಂದು ರಾಯ್ ಪುರ ವಿಭಾಗದಲ್ಲಿ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್​ನಲ್ಲಿ ಓರ್ವ ನಕ್ಸಲೀಯನನ್ನು ಕೊಲ್ಲಲಾಗಿತ್ತು.
  • ಕಳೆದ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್​ಗಳಲ್ಲಿ 219 ನಕ್ಸಲರು ಹತರಾಗಿದ್ದರು.
  • ಜನವರಿ 6ರಂದು ಬಿಜಾಪುರ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವನ್ನು ಐಇಡಿ ಬಾಂಬ್​ನಿಂದ ಸ್ಫೋಟಿಸಿದ್ದರಿಂದ ಎಂಟು ಪೊಲೀಸ್ ಸಿಬ್ಬಂದಿ ಮತ್ತು ವಾಹನದ ಚಾಲಕ ಮೃತಪಟ್ಟಿದ್ದರು.
  • ಬುಧವಾರ ಕರ್ನಾಟಕದಲ್ಲಿ 6 ಜನ ನಕ್ಸಲೀಯರು ಶಸ್ತ್ರಾಸ್ತ್ರ ತ್ಯಜಿಸಿ ಸರ್ಕಾರದ ಮುಂದೆ ಶರಣಾಗತರಾಗಿರುವುದು ಇಲ್ಲಿ ಉಲ್ಲೇಖನಾರ್ಹ.

ಇದನ್ನೂ ಓದಿ: ನಾಗ್ಪುರದಲ್ಲಿ ಕಂಗನಾ, ಅನುಪಮ್ ಖೇರ್ ಜೊತೆ ಕುಳಿತು 'ಎಮರ್ಜೆನ್ಸಿ' ಸಿನಿಮಾ ವೀಕ್ಷಿಸಿದ ಸಚಿವ ಗಡ್ಕರಿ - EMERGENCY FILM SPECIAL SCREENING

ABOUT THE AUTHOR

...view details