ಪೋರ್‌ಬಂದರ್(ಗುಜರಾತ್):ಭಾರತೀಯ ನೌಕಾ ಪಡೆಯ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ (ಎಚ್ಎಲ್) ಗುಜರಾತ್ನ ಪೋರ್‌ಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪತನಗೊಂಡಿದ್ದು, ಮೂವರು ಸಿಬ್ಬಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಘಟನೆ ಸಂಭವಿಸಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ಹೆಲಿಕಾಪ್ಟರ್‌ನಲ್ಲಿ ನಾಲ್ವರು ಸಿಬ್ಬಂದಿಗಳಿದ್ದು, ಒಬ್ಬರನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದೆ.