ಕರ್ನಾಟಕ

karnataka

ETV Bharat / bharat

ಮಾನ್ಸೂನ್ ಮುಂದುವರಿಕೆಗೆ ಪರಿಸ್ಥಿತಿ ಅನುಕೂಲಕರ: 4 ದಿನ ಹಲವೆಡೆ ಭಾರಿ ಮಳೆ ಮುನ್ಸೂಚನೆ - Monsoon to Advance Further - MONSOON TO ADVANCE FURTHER

ನೈಋತ್ಯ ಮಾನ್ಸೂನ್ ಮತ್ತಷ್ಟು ಮುಂದುವರಿಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಾನ್ಸೂನ್ ಮುಂದುವರಿಕೆಗೆ ಪರಿಸ್ಥಿತಿ ಅನುಕೂಲಕರ
ಮಾನ್ಸೂನ್ ಮುಂದುವರಿಕೆಗೆ ಪರಿಸ್ಥಿತಿ ಅನುಕೂಲಕರ (IANS (ಸಂಗ್ರಹ ಚಿತ್ರ))

By ETV Bharat Karnataka Team

Published : Jun 17, 2024, 7:35 PM IST

ನವದೆಹಲಿ: ದೇಶದ ಮತ್ತಷ್ಟು ಭಾಗಗಳಿಗೆ ಮಾನ್ಸೂನ್ ಮುಂದುವರಿಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಭಾರತ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಮುಂದಿನ ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರ, ಛತ್ತೀಸ್ ಗಢ, ಒಡಿಶಾ, ಕರಾವಳಿ ಆಂಧ್ರ, ಪಶ್ಚಿಮ ಬಂಗಾಳದ ಕೆಲವು ಭಾಗಗಳು ಮತ್ತು ಬಿಹಾರದ ಇನ್ನೂ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಮತ್ತಷ್ಟು ಮುಂದುವರಿಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಶಾನ್ಯ ರಾಜ್ಯಗಳು, ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏತನ್ಮಧ್ಯೆ, ಈಶಾನ್ಯ ಅಸ್ಸಾಂನಲ್ಲಿ ಉಂಟಾಗಿರುವ ಚಂಡಮಾರುತದ ಅಲೆ ಉಂಟಾಗಿದ್ದು, ಉತ್ತರ-ದಕ್ಷಿಣದಿಕ್ಕಿನಲ್ಲಿ ಚಲಿಸಲಿರುವ ಮಾರುತಗಳು ಉತ್ತರ ಬಿಹಾರದ ಮೇಲೆ ಸಾಗುವ ಸಾಧ್ಯತೆಯಿದೆ. ಈ ಚಂಡಮಾರುತದ ಅಲೆಯಿಂದ ಮುಂದಿನ ಐದು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30 ರಿಂದ 40 ಕಿಮೀ ವೇಗದಲ್ಲಿ) ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಬಂಗಾಳದ ಗಂಗಾ ನದಿ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30 ರಿಂದ 40 ಕಿಮೀ ವೇಗದಲ್ಲಿ) ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಂತರ ಹೆಚ್ಚಾಗುವ ಸಾಧ್ಯತೆಯಿದೆ. ಜೂನ್ 20 ಮತ್ತು 21 ರಂದು ಒಡಿಶಾದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಜೂನ್ 17, 18 ಮತ್ತು 21 ರಂದು ಕೇರಳ ಮತ್ತು ಮಾಹೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 17 ರಿಂದ 19 ರ ಅವಧಿಯಲ್ಲಿ ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ, ಜೂನ್ 17 ರಂದು ತೆಲಂಗಾಣ, ಜೂನ್ 17, 20 ಮತ್ತು 21 ರಂದು ಕರಾವಳಿ ಕರ್ನಾಟಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ : ಮುತ್ತಿನನಗರಿಯಲ್ಲಿ ಮುಂಗಾರು ಅಬ್ಬರ: ಧರೆಗುರುಳಿದ 200 ವರ್ಷದ ಮರ, ವ್ಯಕ್ತಿಯ ತಲೆಗೆ ಪೆಟ್ಟು, ವಾಹನಗಳು ಜಖಂ - Heavy Rain in Hyderabad

ABOUT THE AUTHOR

...view details