ನವದೆಹಲಿ:ಹರಿಯಾಣ ವಿಧಾನಸಭೆ ಚುನಾವಣೆಯ ಸೋಲಿನ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಚುನಾವಣೋತ್ತರ ಸಮೀಕ್ಷೆ ಮತ್ತು ಪಕ್ಷದ ಪ್ರಕಾರ ಪಕ್ಷಕ್ಕೆ ಅಧಿಕಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹೀನಾಯ ಸೋಲು ಪಕ್ಷಕ್ಕೆ ಭಾರಿ ಹಿನ್ನಡೆ ಉಂಟು ಮಾಡಿದೆ. ಮತಯಂತ್ರಗಳು ಟ್ಯಾಂಪರಿಂಗ್ ಆಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಕ್ಷ ಈ ಬಗ್ಗೆ ತನಿಖೆ ನಡೆಸಿ ಚುನಾವಣಾ ಆಯೋಗಕ್ಕೆ ದೂರು ನೀಡಲು ತೀರ್ಮಾನಿಸಿದೆ.
ಚುನಾವಣಾ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಶೀಘ್ರದಲ್ಲೇ ಸಮಿತಿ ರಚಿಸಲಿದ್ದಾರೆ. ಹನ್ನೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ನಡೆದಿದೆ. ಫಲಿತಾಂಶವನ್ನು ಪರಿಶೀಲನೆಗೆ ಒಳಪಡಿಸಿ, ದಾಖಲೆ ಸಮೇತ ಚುನಾವಣೆ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಚೌಹಾಣ್ ತಿಳಿಸಿದರು.