ರಾಮನಾಥಪುರಂ (ತಮಿಳುನಾಡು) :ತಮ್ಮ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಕಾರಿಗೆ ಹಾನಿ ಮಾಡಿದ್ದಾರೆ ಎಂದು ರಾಮೇಶ್ವರಂಗೆ ಯಾತ್ರೆ ಕೈಗೊಂಡಿದ್ದ ಮಹಿಳಾ ಸಂತೆ ಸಫ್ರಾ ಪಾಠಕ್ ಅವರು ಆರೋಪಿಸಿದ್ದಾರೆ. ಈ ಯಾತ್ರೆ ಈಗ ವಿವಾದಕ್ಕೆ ಕಾರಣವಾಗಿದೆ. ಸಫ್ರಾ ಪಾಠಕ್ ಮತ್ತು ಆಕೆಯ ಸಂಬಂಧಿಕರು ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪಾಠಕ್, ತನ್ನ ತಂದೆ ಮತ್ತು ಸಹೋದರನೊಂದಿಗೆ ರಾಮೇಶ್ವರಂಗೆ 4,000 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದರು.
ಸಿಸಿಟಿವಿ ದೃಶ್ಯಾವಳಿಗಳು ಆಕೆಯ ಹೇಳಿಕೆಗಳಿಗೆ ವಿರುದ್ಧವಾಗಿವೆ. ಸಂತೆಯ ಸಹೋದರ ರಸ್ತೆಯಿಂದ ಕಲ್ಲುಗಳನ್ನು ಸಂಗ್ರಹಿಸಿ ಕಾರಿನಲ್ಲಿ ಇರಿಸುತ್ತಿರುವುದು ದೃಶ್ಯಾವಳಿಯಲ್ಲಿ ಕಂಡು ಬಂದಿದೆ. ವದಂತಿಗಳನ್ನು ಹಬ್ಬಿಸಿ, ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹುಟ್ಟುಹಾಕಿದ್ದಕ್ಕಾಗಿ ಪಾಠಕ್ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.