ಕರ್ನಾಟಕ

karnataka

ETV Bharat / bharat

ಮಹಿಳೆಯರ ಮೇಲಿನ ದೌರ್ಜನ್ಯ ಮಹಾಪಾಪ, ಅಪರಾಧಿಗಳನ್ನು ಬಿಡಬಾರದು: ಪ್ರಧಾನಿ ಮೋದಿ - Modi On Crimes Against Women - MODI ON CRIMES AGAINST WOMEN

ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದರು. ಈ ಬಗ್ಗೆ ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು.

pm MODI
ಪ್ರಧಾನಿ ಮೋದಿ (ANI)

By ETV Bharat Karnataka Team

Published : Aug 25, 2024, 9:23 PM IST

ಜಲಗಾಂವ್​​ (ಮಹಾರಾಷ್ಟ್ರ):ಕೋಲ್ಕತ್ತಾದ ಆರ್​​ಜಿ ಕರ್​ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಮಹಾಪಾಪ. ತಪ್ಪಿತಸ್ಥರನ್ನು ಬಿಡಬಾರದು ಎಂದು ರಾಜ್ಯ ಸರ್ಕಾರಗಳಿಗೆ ನಾನು ಸೂಚಿಸುತ್ತಿದ್ದೇನೆ. ದೇಶವು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭಾನುವಾರ ನಡೆದ ಲಖ್​​ಪತಿ ದೀದಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳೆಯರ ಸುರಕ್ಷತೆ ಬಹಳ ಮುಖ್ಯ. ಮಹಿಳೆಯರ ಮೇಲಿನ ಅಪರಾಧಗಳು ಅಕ್ಷಮ್ಯ. ಅಪರಾಧಿಗಳು ಯಾರೇ ಆಗಿರಲಿ, ಅವರನ್ನು ಬಿಡಬಾರದು. ಇಂತಹ ಪ್ರಕರಣಗಳಲ್ಲಿ ಅಪರಾಧ ಎಸಗುವವರಿಗೆ ಕಠಿಣ ಶಿಕ್ಷೆಯನ್ನು ನೀಡುವ ಕಾನೂನುಗಳನ್ನು ಸರ್ಕಾರ ರೂಪಿಸಲಿದೆ ಎಂದು ಹೇಳಿದರು.

ಮಹಿಳೆಯರ ಸುರಕ್ಷತೆ ಮತ್ತು ಸ್ವಾವಲಂಬನೆಗಾಗಿ ಸ್ವಾತಂತ್ರ್ಯದ ನಂತರದ ಹಿಂದಿನ ಎಲ್ಲಾ ಸರ್ಕಾರಗಳು ಮಾಡಿದ್ದಕ್ಕಿಂತ ಹೆಚ್ಚಿನದನ್ನು ತಮ್ಮ ಸರ್ಕಾರ ಕಳೆದ 10 ವರ್ಷಗಳಲ್ಲಿ ಸಾಧಿಸಿ ತೋರಿಸಿದೆ. ಇನ್ನು ಮುಂದೆಯೂ ಮಹಿಳೆಯರ ಪರವಾಗಿ ನಮ್ಮ ಸರ್ಕಾರ ಇರಲಿದೆ. ಮುಂದೆ ಕಠಿಣ ಕಾನೂನುಗಳು ಜಾರಿಯಾಗಲಿವೆ ಎಂದರು.

ಮಹಿಳಾ ಸಂಘಗಳಿಗೆ ದೊಡ್ಡ ಮಟ್ಟದಲ್ಲಿ ಸಾಲ:2014ರವರೆಗೆ ಹಿಂದಿನ ಸರ್ಕಾರಗಳಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ 25 ಸಾವಿರ ಕೋಟಿ ರೂಪಾಯಿಗಿಂತ ಕಡಿಮೆ ಸಾಲ ನೀಡಲಾಗಿತ್ತು. ಆದರೆ, ಕಳೆದ 10 ವರ್ಷಗಳಲ್ಲಿ ಎನ್​ಡಿಎ ಸರ್ಕಾರ 9 ಸಾವಿರ ಕೋಟಿ ರೂ.ಗಳ ನೆರವು ನೀಡಿದೆ. ಲಖ್​​ಪತಿ ದೀದಿ ಯೋಜನೆಯು ಮಹಿಳೆಯರ ಆದಾಯವನ್ನು ಹೆಚ್ಚಿಸುವುದಲ್ಲದೆ, ಭವಿಷ್ಯದ ಪೀಳಿಗೆಯನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದರು.

ಭಾರತವನ್ನು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುವಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಲಖ್​​ಪತಿ ದೀದಿ ಯೋಜನೆಯಿಂದ ವಾರ್ಷಿಕ 1 ಲಕ್ಷ ರೂಪಾಯಿ ಆದಾಯವನ್ನು ಗಳಿಸುತ್ತಿದ್ದಾರೆ. ಸರಾಸರಿ ಮಾಸಿಕ ಆದಾಯ 10 ಸಾವಿರ ರೂಪಾಯಿ ಆಗಿದೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದರು.

ಇದನ್ನೂ ಓದಿ:ಕಾಶ್ಮೀರದಲ್ಲಿ ಜಮಾತ್​-ಎ-ಇಸ್ಲಾಮಿ ಮೇಲಿನ ನಿಷೇಧ ತೆರವುಗೊಳಿಸಿ: ಮೆಹಬೂಬಾ ಮುಫ್ತಿ ಆಗ್ರಹ - Jammu Kashmir Elections

ABOUT THE AUTHOR

...view details