ಲಡಾಖ್ (ಜಮ್ಮು-ಕಾಶ್ಮೀರ್):ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಸಿಯಾಚಿನ್‌ಗೆ ಭೇಟಿ ನೀಡಿದ್ದು, ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ನಿಯೋಜನೆಗೊಂಡಿರುವ ಸೈನಿಕರ ಜೊತೆ ಸಂವಾದ ನಡೆಸಿದರು. ಇದಕ್ಕೂ ಮುನ್ನ ಸಿಯಾಚಿನ್ ಬೇಸ್ ಕ್ಯಾಂಪ್‌ನಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ:ಇಂದು ಬೆಳಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಮಾನದ ಮೂಲಕ ಸಿಯಾಚಿನ್‌ಗೆ ತೆರಳಿದ್ದರು. ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ‘ಅಲ್ಲಿ ನಿಯೋಜಿಸಲಾದ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ’ ಎಂದು ಬರೆದುಕೊಳ್ಳುವ ಮೂಲಕ ಮಾಹಿತಿ ನೀಡಿದ್ದರು.
ಲಡಾಕ್‌ನಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ: ಲಡಾಖ್‌ನ ಸಿಯಾಚಿನ್ ಬೇಸ್ ಕ್ಯಾಂಪ್‌ನಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾನು ಹೋಳಿ ಸಂದರ್ಭದಲ್ಲಿ ಬರಲು ಸಾಧ್ಯವಾಗಲಿಲ್ಲ. ಆದರೆ ಈಗ ನಾನು ಹೋಳಿ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ. ಸಿಯಾಚಿನ್ ಭೂಮಿ ಸಾಮಾನ್ಯ ಭೂಮಿ ಅಲ್ಲ. ಇದು ಭಾರತೀಯ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ನಿರ್ಣಯದ ಸ್ಪಷ್ಟವಾದ ಸಂಕೇತವಾಗಿದೆ. ಇದು ಭಾರತೀಯ ಶೌರ್ಯದ ದೇಗುಲವಾಗಿದೆ ಎಂದು ಹೇಳಿದರು. ರಕ್ಷಣಾ ಸಚಿವರು ಈ ವರ್ಷ ಹೋಳಿಯಲ್ಲಿ ಲಡಾಖ್‌ಗೆ ಭೇಟಿ ನೀಡಬೇಕಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಆ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.