ನವದೆಹಲಿ:ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇಮೇಲ್ ಕಳುಹಿಸಿದ್ದ ಆರೋಪದಡಿ 13 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಉದ್ದೇಶಪೂರ್ವಕವಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋಜಿನ ಉದ್ದೇಶಕ್ಕೆ ಹಾಗು ಈ ರೀತಿ ಇಮೇಲ್ ಕಳುಹಿಸಿದಾಗ ನನ್ನನ್ನು ಪೊಲೀಸರು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲದಿಂದ ಈ ಕೃತ್ಯ ಎಸಗಿರುವುದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಬಾಲಾಪರಾಧಿ ನ್ಯಾಯ ಮಂಡಳಿಗೆ ಹಾಜರುಪಡಿಸುವುದಾಗಿ ಹೇಳಿದ್ದಾರೆ.