ನವದೆಹಲಿ:ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಅನಾಮಧೇಯ ವ್ಯಕ್ತಿಯೊಬ್ಬನಿಂದ ಬಾಂಬ್ ಹುಸಿ ಬೆದರಿಕೆಯ ಕರೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪರಿಶೀಲಿಸಿದಾಗ ಇದು ಬರೀ ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 5.15 ಗಂಟೆ ಸುಮಾರಿಗೆ, ದೆಹಲಿಯಿಂದ ಕೋಲ್ಕತ್ತಾಗೆ ತೆರಳಬೇಕಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ವಿಚಾರಣೆ ವೇಳೆ ಈ ಬಾಂಬ್ ಬೆದರಿಕೆಯ ಹುಸಿ ಕರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯಾಣಿಕರ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ. ಜೊತೆಗೆ ನಕಲಿ ಕರೆ ಮಾಡಿದ ವ್ಯಕ್ತಿಯನ್ನು ಗುರುತಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.