ನವದೆಹಲಿ: "ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ" ಎಂದು ಪರಾಜಿತ ಅಭ್ಯರ್ಥಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಸದ್ಯದ ಟ್ರೆಂಡ್‌ಗಳ ಪ್ರಕಾರ, ಆಮ್ ಆದ್ಮಿ ಪಕ್ಷ ದೆಹಲಿಯ ಅಧಿಕಾರ ಗದ್ದುಗೆಯಿಂದ ಬಹುತೇಕ ಹೊರಬಿದ್ದಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದು, 70 ಸ್ಥಾನಗಳಲ್ಲಿ 48 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆಪ್ 22 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡುತ್ತಿರುವುದು (ETV Bharat) ತಮ್ಮ ಸೋಲಿನ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, "ನಾವು ಜನರ ಆದೇಶವನ್ನು ಬಹಳ ನಮ್ರತೆಯಿಂದ ಸ್ವೀಕರಿಸುತ್ತೇವೆ. ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ ಮತ್ತು ಜನರು ಅವರಿಗೆ ಮತ ಹಾಕಿದ್ದು, ಎಲ್ಲಾ ಭರವಸೆಗಳನ್ನು ಅವರು ಈಡೇರಿಸಲಿ. ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ನಿರ್ವಹಿಸುವುದಲ್ಲದೆ, ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ" ಎಂದು ಹೇಳಿದ್ದಾರೆ.
ಜಿದ್ದಾಜಿದ್ದಿನ ಕದನದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಪರಾಜಯಗೊಂಡರೆ, ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ವಿರುದ್ಧ ಸೋಲು ಅನುಭವಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಅವರ ಸೋಲಿನಿಂದ ಎಎಪಿಗೆ ಭಾರೀ ಮುಖಭಂಗವಾಗಿದೆ.
ಇದನ್ನೂ ಓದಿ:ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್ಗೆ ಭಾರಿ ಆಘಾತ: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೂ ಸೋಲು - DELHI ELECTIONS 2025