ಕರ್ನಾಟಕ

karnataka

ETV Bharat / bharat

ದೆಹಲಿ ಅಬಕಾರಿ ಕೇಸ್​: ಆಗಸ್ಟ್​ 20ರ ವರೆಗೆ ಸಿಎಂ ಕೇಜ್ರಿವಾಲ್​ ಬಂಧನ ವಿಸ್ತರಣೆ - Arvind Kejriwal

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರ ಸಿಬಿಐ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಸಿಎಂ ಕೇಜ್ರಿವಾಲ್​ ಬಂಧನ ವಿಸ್ತರಣೆ
ಸಿಎಂ ಕೇಜ್ರಿವಾಲ್​ ಬಂಧನ ವಿಸ್ತರಣೆ (ANI)

By ANI

Published : Aug 8, 2024, 6:06 PM IST

ನವದೆಹಲಿ:ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ವಿಸ್ತರಿಸಿತು. ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆಗಸ್ಟ್ 8ರಂದು ನ್ಯಾಯಾಂಗ ಬಂಧನ ಮುಗಿಯುವ ಕಾರಣ, ಕೇಜ್ರಿವಾಲ್​ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಬೇಕೆಂದು ಕೋರಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಸಿಬಿಐ ಕೋರ್ಟ್​ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ, ಬಂಧನವನ್ನು ಆಗಸ್ಟ್ 20ರ ವರೆಗೆ ವಿಸ್ತರಿಸಿ ಆದೇಶಿಸಿದರು.

ಈ ಮೂಲಕ ಕೇಜ್ರಿವಾಲ್​ ಅವರ ಜೈಲು ಶಿಕ್ಷೆ ಮತ್ತೆ ಮುಂದುವರಿದಂತಾಗಿದೆ. ಈಚೆಗಷ್ಟೇ ದೆಹಲಿ ಹೈಕೋರ್ಟ್​ ಕೂಡ ಸಿಬಿಐ ಬಂಧನವನ್ನು ಎತ್ತಿ ಹಿಡಿದಿತ್ತು. ಜೊತೆಗೆ, ಜಾಮೀನು ಅರ್ಜಿಯನ್ನೂ ವಜಾ ಮಾಡಿತ್ತು.

ಕೇಜ್ರಿವಾಲ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ:ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ಜೂನ್​ 26ರಂದು ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಬಳಿಕ ಜುಲೈ 29ರಂದು ಅವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಇದಕ್ಕೂ ಮೊದಲು ಜುಲೈ 12ರಂದು ಕೇಜ್ರಿವಾಲ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಲಾಗಿತ್ತು.

ಇದಕ್ಕೂ ಮೊದಲು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಾರ್ಚ್‌ ತಿಂಗಳಲ್ಲಿ ದೆಹಲಿ ಸಿಎಂ ಕೇಜ್ರಿವಾಲ್​ ಅವರನ್ನು ಬಂಧಿಸಿತ್ತು. ಅದೂ ಕೂಡ ನ್ಯಾಯಾಲಯಕ್ಕೆ ಪ್ರಕರಣದ ಚಾರ್ಜ್​ಶೀಟ್​ ಸಲ್ಲಿಸಿದೆ.

ಜಾಮೀನು ನೀಡಿದ್ದ ವಿಚಾರಣಾ ಕೋರ್ಟ್​:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಜುಲೈ 12ರಂದು ಜಾಮೀನು ಮಂಜೂರು ಮಾಡಿತ್ತು. ಇದನ್ನು ವಿರೋಧಿಸಿ ಸಿಬಿಐ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಜೊತೆಗೆ ಅವರನ್ನು ಜುಲೈ 26ರಂದು ಬಂಧಿಸಿತ್ತು. ಈ ಪ್ರಕರಣದಲ್ಲಿ ದೆಹಲಿ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ಬಿಆರ್​ಎಸ್​ ನಾಯಕಿ ಕೆ.ಕವಿತಾ ಮತ್ತು ಇತರ ಆರೋಪಿಗಳನ್ನು ಸಿಬಿಐ ಬಂಧಿಸಿದೆ.

ಇಡಿ ತಾನು ವಿಚಾರಣೆ ನಡೆಸುತ್ತಿರುವ ಪ್ರಕರಣದಲ್ಲಿ ದೆಹಲಿ ಸಿಎಂಗೆ ಸಿಕ್ಕ ಜಾಮೀನು ಅರ್ಜಿಯನ್ನು ರದ್ದು ಮಾಡಬೇಕು ಎಂದು ಕೋರಿದೆ. ಈಚೆಗೆ ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್​, ಮತ್ತೆ ಅವರನ್ನು ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ಇದೆಯೇ ಎಂದು ಕೋರ್ಟ್​ ಪ್ರಶ್ನಿಸಿದೆ.

ಇದನ್ನೂ ಓದಿ:ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್, ಜಾಮೀನು ಅರ್ಜಿ ವಜಾ - Delhi Excise case

ABOUT THE AUTHOR

...view details