ನವದೆಹಲಿ:ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಸಿಎಂ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೆಶನಾಲಯ ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಕಳೆದ ವರ್ಷ ಮಾರ್ಚ್ನಲ್ಲಿ ಕೇಜ್ರಿವಾಲ್ ವಿರುದ್ಧ ವಿಶೇಷ ಪಿಎಎಲ್ಎ ನ್ಯಾಯಾಲಯಕ್ಕೆ ಇಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿತ್ತು. ಇದೀಗ ದೆಹಲಿ ಚುನಾವಣೆ ಹೊತ್ತಲ್ಲಿ ಕೇಂದ್ರ ಗೃಹ ಸಚಿವಾಲಯವು ಕಾನೂನು ಪ್ರಕಾರ ಜಾರಿ ನಿರ್ದೇಶನಾಲಯಕ್ಕೆ ತನಿಖೆಗೆ ಒಪ್ಪಿಗೆ ನೀಡಿದೆ.
ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಈ ಹಗರಣದ ಪ್ರಮುಖ ಆರೋಪಿ ಎಂದು ಇಡಿ ದೂರಿದೆ. ಅಲ್ಲದೆ ಕೇಜ್ರಿವಾಲ್ ತಮ್ಮ ಸರ್ಕಾರದ ಇತರೆ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಶಾಮೀಲಾಗಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.