ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ 60ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಮಯೂರ್ ವಿಹಾರ್‌ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಚಾಣಕ್ಯಪುರಿಯ ಸಂಸ್ಕೃತಿ ಶಾಲೆ, ವಸಂತ್ ಕುಂಜ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಸಾಕೇತ್‌ನ ಅಮಿಟಿ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇ - ಮೇಲ್‌ಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಎಲ್ಲ ಐದು ಶಾಲೆಗಳಲ್ಲಿ ತೀವ್ರ ಪರಿಶೀಲನೆ ಕೈಗೊಳ್ಳಲಾಗಿದೆ. ಬಾಂಬ್ ಪತ್ತೆ ತಂಡ, ಬಾಂಬ್ ನಿಷ್ಕ್ರಿಯ ದಳ ಮತ್ತು ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಶಾಲೆಗೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದರಿಂದ ಹಿಂದೆ ಒಬ್ಬ ವ್ಯಕ್ತಿ ಇದ್ದಾನೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಸೆಲ್ ಸೇರಿದಂತೆ ಭದ್ರತಾ ಸಂಸ್ಥೆಗಳು ಬಾಂಬ್ ಬೆದರಿಕೆ ಬಂದಿರುವ ಇ - ಮೇಲ್ನ ಮೂಲವನ್ನು ಹುಡುಕುತ್ತಿವೆ.
ಇದನ್ನೂ ಓದಿ:ಕೇರಳ: ಪೊಲೀಸರು, ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ - Shootout
ದೆಹಲಿ-ಎನ್‌ಸಿಆರ್‌ನ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಯ ಕುರಿತು ದೆಹಲಿ ಪೊಲೀಸ್ ಪಿಆರ್ಒ ಸುಮನ್ ನಲ್ವಾ ಅವರು ಮಾತನಾಡಿದ್ದು, "ಹಲವಾರು ಶಾಲೆಗಳು ತಮ್ಮ ಕ್ಯಾಂಪಸ್‌ನಲ್ಲಿ ಬಾಂಬ್ ಇರುವ ಬಗ್ಗೆ ಇಮೇಲ್ ಬಂದಿದೆ ಎಂದು ನಮ್ಮನ್ನು ಸಂಪರ್ಕಿಸಿದ್ದಾರೆ. ದೆಹಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ತಪಾಸಣೆ ವೇಳೆ ಇದುವರೆಗೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಯಾರೋ ನಗರದಲ್ಲಿ ಭೀತಿ ಸೃಷ್ಟಿಸಲು ಈ ರೀತಿ ಮಾಡಿದ್ದಾರೆ ಎಂದು ತೋರುತ್ತದೆ. ಗಾಬರಿಯಾಗದಂತೆ ನಾನು ಪೋಷಕರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಬೆದರಿಕೆ ಇ-ಮೇಲ್ ಬಂದ ಶಾಲೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಭೇಟಿ:ದೆಹಲಿ ಲೆಫ್ಟಿನೆಂಟ್ ಜನರಲ್ ವಿಕೆ ಸಕ್ಸೇನಾ ಅವರು, ಬಾಂಬ್ ಬೆದರಿಕೆ ಕರೆ ಬಂದ ಮಾಡೆಲ್ ಟೌನ್‌ನಲ್ಲಿರುವ ಡಿಎವಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, "ದೆಹಲಿ ಪೊಲೀಸರು ಶಾಲೆಗಳಿಗೆ ಬೆದರಿಕೆ ಮೇಲ್ ಬಂದಿದೆ ಎಂಬ ಸುದ್ದಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ. ಶ್ವಾನದಳಗಳು ಮತ್ತು ಬಾಂಬ್ ನಿಷ್ಕ್ರಿಯ ಘಟಕಗಳು ಸಹ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ನಾನೂ ಸೇರಿದಂತೆ ದೆಹಲಿ ಪೊಲೀಸರು ಸನ್ನದ್ಧರಾಗಿದ್ದೇವೆ. ಈ ಬಗ್ಗೆ ಯಾರೂ ಭಯಪಡದಂತೆ ದೆಹಲಿಯ ಜನರಿಗೆ ಭರವಸೆ ನೀಡಲು ಬಯಸುತ್ತೇನೆ. ಈ ಇಮೇಲ್‌ಗಳು ಎಲ್ಲಿಂದ ಬರುತ್ತಿವೆ ಎಂಬುದನ್ನು ದೆಹಲಿ ಪೊಲೀಸರು ಕಂಡುಹಿಡಿದಿದ್ದಾರೆ, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ, ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಇದೇ ವೇಳೆ ಅವರು ದೆಹಲಿ ಜನರಿಗೆ ಅಭಯ ನೀಡಿದ್ದಾರೆ.