ತಿರುವನಂತಪುರಂ, ಕೇರಳ: ಕೇರಳ ಪೊಲೀಸ್ನ ವಿಶೇಷ ಕಾರ್ಯಾಚರಣೆ ಗುಂಪಿನ ಕಮಾಂಡೊ ಸರ್ವೀಸ್ ರಿವಾಲ್ವರ್ನಿಂದ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
35 ವರ್ಷದ ವಿನೀತ್ ಸಾವನ್ನಪ್ಪಿದವರು. ತಮ್ಮ ಗರ್ಭಿಣಿ ಪತ್ನಿಯೊಂದಿಗೆ ಸಮಯ ಕಳೆಯಲು ರಜೆ ನೀಡದ ಹಿನ್ನಲೆ ಬೆಸತ್ತು ಮಲಪ್ಪುರಂ ಜಿಲ್ಲೆಯಲ್ಲಿನ ಅರೆಕೊಡ್ನಲ್ಲಿ ಪೊಲೀಸ್ ಕ್ಯಾಂಪ್ನಲ್ಲಿ ಭಾನುವಾರ ತಮ್ಮ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.
ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳು:ಇವರ ಈ ಸಾವು ಕೇರಳ ಪೊಲೀಸ್ ಸಿಬ್ಬಂದಿಗಳಲ್ಲಿ ಹೆಚ್ಚುತ್ತಿರುವ ತೀವ್ರ ಹೊರೆ ಹಾಗೂ ಈ ಸಂಬಂಧಿತ ಸಾವುಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬುದನ್ನು ತೋರಿಸಿದೆ. ಅನಧಿಕೃತ ಮೂಲಕಗಳ ಪ್ರಕಾರ ಇಲ್ಲಿವರೆಗೆ 90 ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ವರದಿಗಳಾಗಿವೆ.
ಆದರೆ ಕೆಲಸದೊತ್ತಡದ ಆರೋಪವನ್ನು ಇಲಾಖೆ ತಳ್ಳಿ ಹಾಕಿದೆ;ವಯನಾಡು ಮೂಲಕದ ವಿನೀತ್ ಕಳೆದ 45ದಿನಗಳಿಂದ ರಜೆ ಹೊರತಾಗಿ ಸತತವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆಯಾದರೂ, ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ. ಘಟನೆ ಬೆನ್ನಲ್ಲೇ ತಕ್ಷಣಕ್ಕೆ ವಿನೀತ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ದೇಶ ಅತ್ಯುತ್ತಮ ಪೊಲೀಸ್ ಸೇವೆಗಳಲ್ಲಿ ಒಂದಾಗಿರುವ ಕೇರಳ ಪೊಲೀಸರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಒಂದು ಸಿಬ್ಬಂದಿ ಕೊರತೆಯಾಗಿದ್ದು, ಇದು ಇರುವ ಸಿಬ್ಬಂದಿಗಳ ಮೇಲೆ ಕೆಲಸದ ಹೊರೆಯನ್ನು ಹೆಚ್ಚಿಸಿದೆ.
ಒತ್ತಡ ನಿಭಾಯಿಸುವ ದೃಷ್ಟಿಯಿಂದ ಸಿಬ್ಬಂದಿಯೊಂದಿಗೆ ಸಮಾಲೋಚನೆ:ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅನೇಕ ಪೊಲೀಸ್ ಸಿಬ್ಬಂದಿಗಳು ತಮ್ಮ ಕೆಲಸದ ಹೊರೆಯನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸ್ ಮತ್ತು ಗೃಹ ಸಚಿವಾಲಯ ಪೊಲೀಸ್ ಸಿಬ್ಬಂದಿಗಳಿಗೆ ಸಮಾಲೋಚನೆ ನಡೆಸಲು ಮುಂದಾಗಿದ್ದು, ಇದುವರೆಗೆ 6,000 ಮಂದಿಗಗಗೆ ಸಮಾಲೋಚನೆ ಮಾಡಲಾಗಿದೆ.
ಅನೇಕ ಕಾರಣಗಳಿಂದ ಪೊಲೀಸ್ ಸೇವೆಯಲ್ಲಿ ಇತರ ಕೆಲಸಗಳಂತೆ ದಿನದ ಕೆಲಸದ ಅವಧಿಯನ್ನು 8 ಗಂಟೆಗೆ ನಿಗದಿ ಮಾಡಿಲ್ಲ. ಇದೀಗ 52 ಪೊಲೀಸ್ ಠಾಣೆಗಳಲ್ಲಿ 8 ಗಂಟೆ ರೋಸ್ಟರ್ ಅವಧಿಯನ್ನು ಪರಿಚಯಿಸಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್, ಕೇರಳ ವಿಧಾನಸಭಾ ಅಧಿವೇಶನದಲ್ಲಿ ಮಾಹಿತಿ ಒದಗಿಸಿದ್ದಾರೆ. (ಐಎಎನ್ಎಸ್)
ಇದನ್ನೂ ಓದಿ: ಶವವಾಗಿ ಪತ್ತೆಯಾದ ಬಿಜೆಪಿ ನಾಯಕನ ಪುತ್ರ; ಕೊಲೆಯೋ ಅಥವಾ?
ಆತ್ಮಹತ್ಯೆ ಪರಿಹಾರವಲ್ಲ;ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).