ನವದೆಹಲಿ:ಕುಕಿ ಮತ್ತು ಮೈಥೇಯಿ ಸಮುದಾಯಗಳ ಮಧ್ಯೆ ವರ್ಷಗಳಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಸಿಲುಕಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಗುರುವಾರದಿಂದ ಜಾರಿಯಾಗಿದೆ.
ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಲ್ಕು ದಿನಗಳ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಆದೇಶ ಮಾಡಿದ್ದಾರೆ.
ಸದ್ಯ ಅಸ್ತಿತ್ವದಲ್ಲಿರುವ ಸರ್ಕಾರ ಮತ್ತು ವಿಧಾನಸಭೆಯನ್ನು ಅಮಾನತಿನಲ್ಲಿಡಲಾಗುವುದು. ಸಂವಿಧಾನದ ಪ್ರಕಾರ, ರಾಜ್ಯದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ರಾಷ್ಟ್ರಪತಿಗಳು ಅಭಿಪ್ರಾಯಪಟ್ಟಿದ್ದಾಗಿ ಗೃಹ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿದೆ.
ರಾಜ್ಯದಲ್ಲಿ ರಾಜಕೀಯ ಅಸ್ತಿರತೆ ಉಂಟಾಗಿದೆ. ಹೀಗಾಗಿ, ಸಂವಿಧಾನದ 356ನೇ ವಿಧಿಯಡಿ ದತ್ತವಾಗಿರುವ ಅಧಿಕಾರವನ್ನು ಬಳಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗುತ್ತಿದೆ. ರಾಜ್ಯ ಸರ್ಕಾರ ನಿರ್ವಹಿಸಬೇಕಿದ್ದ ಎಲ್ಲಾ ಕಾರ್ಯ, ಅಧಿಕಾರವನ್ನು ಇಂದಿನಿಂದ ಆ ರಾಜ್ಯದ ರಾಜ್ಯಪಾಲರು ವಹಿಸಿಕೊಳ್ಳಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.