ಕರ್ನಾಟಕ

karnataka

ETV Bharat / bharat

ನವೆಂಬರ್​ 13ರಂದು ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ - WAYANAD LOK SABHA BY ELECTION

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್​ 13ರಂದು ಉಪ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್​ 25 ಕಡೇಯ ದಿನವಾಗಿದೆ.

ec-announce-wayanad-lok-sabha-by-election-date
ಸಾಂದರ್ಭಿಕ ಚಿತ್ರ (IANS)

By ETV Bharat Karnataka Team

Published : Oct 15, 2024, 5:21 PM IST

Updated : Oct 16, 2024, 2:47 PM IST

ನವದೆಹಲಿ​: ರಾಹುಲ್​ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್​ 13ರಂದು ಉಪ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್​ ವಿಧಾನಸಭಾ ಚುನಾವಣಾ ವೇಳಾಪಟ್ಟಿಯ ಜೊತೆಗೆ ಭಾರತೀಯ ಚುನಾವಣಾ ಆಯೋಗ ಇಂದು 2 ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ 48 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಘೋಷಣೆ ಮಾಡಿತು.

2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್​ ಬರೇಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಗೆದ್ದಿದ್ದರು. ನಂತರದಲ್ಲಿ, ರಾಯ್​ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡ ಅವರು ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕ್ಷೇತ್ರದಿಂದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ವಯನಾಡ್ ಉಪಚುನಾವಣೆ ವೇಳಾಪಟ್ಟಿ:ನಾಮಪತ್ರ ಸಲ್ಲಿಸಲು ಕಡೇಯ ದಿನ ಅಕ್ಟೋಬರ್​ 25. ನಾಮಪತ್ರ ಹಿಂಪಡೆಯಲು ಕಡೇಯ ದಿನ ಅಕ್ಟೋಬರ್​ 30. ಮತ ಎಣಿಕೆ ನವೆಂಬರ್​ 23.

ಮಹಾರಾಷ್ಟ್ರದ ನಾದೇಂಡ್ ಲೋಕಸಭಾ ಕ್ಷೇತ್ರಕ್ಕೂ ಕೂಡಾ ನವೆಂಬರ್​ 13ರಂದು ಉಪ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್

Last Updated : Oct 16, 2024, 2:47 PM IST

ABOUT THE AUTHOR

...view details