ಕರ್ನಾಟಕ

karnataka

ETV Bharat / bharat

ಜಮ್ಮು- ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿದ ಆಯೋಗ - Jammu and Kashmir Assembly Election

ಜಮ್ಮು ಮತ್ತು ಕಾಶ್ಮೀರ ವಿಧಾಸಭೆ ಚುನಾವಣೆಯ ಪ್ರಕ್ರಿಯೆಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಾರಂಭಿಸಿದೆ.

Jammu and Kashmir  Assembly Election  Process for Assembly Election  Election Commission
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿದ ಚುನಾವಣಾ ಆಯೋಗ (ETV Bharat)

By ETV Bharat Karnataka Team

Published : Jun 8, 2024, 1:11 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ನೋಂದಾಯಿತ, ಗುರುತಿಸದ ಪಕ್ಷಗಳಿಗೆ ಸಾಮಾನ್ಯ ಚಿಹ್ನೆಗಳನ್ನು ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿದ ಚುನಾವಣಾ ಆಯೋಗ ಕುರಿತ ಪ್ರತಿಕಾ ಪ್ರಕಟಣೆ (ETV Bharat)

ಇತ್ತೀಚಿನ ಅಧಿಸೂಚನೆಯಲ್ಲಿ, 1968ರ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಪ್ಯಾರಾ 10B ಅಡಿ ಸಾಮಾನ್ಯ ಚಿಹ್ನೆಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುವ ನಿರ್ಧಾರವನ್ನು ಚುನಾವಣಾ ಆಯೋಗ ಘೋಷಿಸಿತು. ಇದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೆ ಅನ್ವಯಿಸುತ್ತದೆ.

ಚುನಾವಣಾ ಆಯೋಗದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಪ್ರಕ್ರಿಯೆ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂಬುದನ್ನು ಸೂಚಿಸುತ್ತದೆ. ಡಿಸೆಂಬರ್ 2023 ರಲ್ಲಿ ಸುಪ್ರೀಂಕೋರ್ಟ್, ಈ ಚುನಾವಣೆಯನ್ನು ಸೆಪ್ಟೆಂಬರ್ 30, 2024ರೊಳಗೆ ನಡೆಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ:ಟ್ರೇಡ್​​ ಮಾರ್ಕ್​ ಬಳಕೆ ವಿಚಾರ: ಕೋರ್ಟ್​ ಆದೇಶದ ಮೇಲೆ ರೆಸ್ಟೋರೆಂಟ್​ ಮೇಲೆ ದಾಳಿ​ - INDORE ACTION AGAINST RESTAURANT

ABOUT THE AUTHOR

...view details