ನವದೆಹಲಿ: ಫೆಬ್ರವರಿ 5ರಂದು ದೆಹಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಇಂದು ತಿಳಿಸಿದೆ.
ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಚುನಾವಣಾ ಆಯೋಗದ ಆಯುಕ್ತರು, ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 10ರಂದು ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 17 ಆಗಿದೆ. ನಾಮಪತ್ರ ಪರಿಶೀಲನೆ ಜನವರಿ 18ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನ ಜನವರಿ 20 ಆಗಿದೆ.
70 ಕ್ಷೇತ್ರಗಳ ದೆಹಲಿ ವಿಧಾನಸಭೆಯ ಅವಧಿ ಇದೇ ಫೆ.23ಕ್ಕೆ ಅಂತ್ಯವಾಗಲಿದ್ದು, ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ.