ಸುಕ್ಮಾ(ಛತ್ತೀಸ್ಗಢ):ಛತ್ತೀಸ್ಗಢದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಇಲ್ಲಿನ ಬಸ್ತಾರ್ ವಿಭಾಗದ ಸುಕ್ಮಾ ಅರಣ್ಯದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭೆಜ್ಜೈ ಪೊಲೀಸ್ ಠಾಣಾ ವ್ಯಾಪ್ತಿಯ ಕಂಗಲ್ತೊಂಗ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಈ ಪ್ರದೆಶದಲ್ಲಿ ನಕ್ಸಲರ ಚಟುವಟಿಕೆಗಳ ಕುರಿತು ಗುಪ್ತಚರ ವರದಿ ನೀಡಿದ ಮಾಹಿತಿ ಮೇರೆಗೆ ಇಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಯೋಧರು ಆಗಮಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಕೂಡ ಸ್ವಯಂ ರಕ್ಷಣೆಗೆ ಗುಂಡು ಹಾರಿಸಿದ್ದಾರೆ.