ಕುಲ್ಗಾಮ್, ಜಮ್ಮು ಕಾಶ್ಮೀರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಾದರ್ ಬೆಹಿಬಾಗ್ ಪ್ರದೇಶದಲ್ಲಿ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಐವರು ಉಗ್ರರು ಹತರಾಗಿದ್ದಾರೆ.
ಕಾದರ್ ಬೆಹಿಬಾಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ:ಸಿಆರ್ಪಿಎಫ್, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇರಿದಂತೆ ಭದ್ರತಾ ಪಡೆಗಳ ಜಂಟಿ ತಂಡವು ಕಾದರ್ ಬೆಹಿಬಾಗ್ ಪ್ರದೇಶವನ್ನು ಸುತ್ತುವರೆದಿದೆ. ಅಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ನಮ್ಮ ತಂಡವು ನಿರ್ದಿಷ್ಟ ಸ್ಥಳವನ್ನು ಸಮೀಪಿಸಿದ ತಕ್ಷಣ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದರು, ಇದಕ್ಕೆ ಸೇನೆ ತಕ್ಕ ಪ್ರತ್ಯುತ್ತರ ನೀಡಿ ಗುಂಡು ಹಾರಿಸಿದರು ಎಂದು ಉನ್ನತ ಸೇನಾ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮುಂದುವರಿದ ಗುಂಡಿನ ಚಕಮಕಿ:ಉಗ್ರರನ್ನು ಸದೆಬಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ. ಮೂಲಗಳ ಪ್ರಕಾರ ಎರಡರಿಂದ ಮೂರು ಉಗ್ರರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ನಂಬಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ಮುಂದುವರೆದಿದೆ.