ಅಂಬಲಾ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರೈತರು ದೆಹಲಿ ಚಲೋ ಪ್ರತಿಭಟನೆ ಇಂದು ರಾಷ್ಟ್ರ ರಾಜಧಾನಿಯತ್ತ ಸಾಗಲಿದೆ. ಮಧ್ಯಾಹ್ನ 1 ಗಂಟೆಗೆ ರೈತರ ಜಾಥಾ ಶಂಭು ಗಡಿ ದಾಟಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬಾಲಾ- ದೆಹಲಿ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ, ಯಾವುದೇ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ. ಜೊತೆಗೆ ರೈತರಿಗೆ ಶಾಂತಿ - ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.
11ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಸತ್ಯಾಗ್ರಹ:ರೈತರ ಪಾದಯಾತ್ರೆ 297ನೇ ದಿನಕ್ಕೆ ಕಾಲಿಟ್ಟಿದ್ದು, ಖಾನೌರಿ ಗಡಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ತಲುಪಿದೆ. ಇಂದು ಮಧ್ಯಾಹ್ನ 1 ಗಂಟೆಗೆ 101 ರೈತರ ಜಾಥಾ (ಮೆರವಣಿ) ಶಂಭು ಗಡಿ ಮೂಲಕ ದೆಹಲಿ ತಲುಪಲಿದೆ. ಕಳೆದ 9 ತಿಂಗಳಿನಿಂದ ನಾವು ಶಾಂತಿಯುತ ಪ್ರತಿಭಟನೆ ನಡೆಸಿದ್ದು, ಇದೀಗ ದೆಹಲಿ ಚಲೋಗೆ ಮುಂದಾಗಿದ್ದೇವೆ ಎಂದು ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ತಿಳಿಸಿದರು.
ಅನುಮತಿ ಪಡೆಯದೇ ಪ್ರತಿಭಟನೆ, 34 ರೈತರನ್ನು ವಶಕ್ಕೆ ಪಡೆದ ಪೊಲೀಸರು:ಗುರುವಾರ ರೈತರ ಅನುಮತಿ ಪಡೆಯದೇ ನೋಯ್ಡಾದ ರಾಷ್ಟ್ರೀಯ ದಲಿತ್ ಪ್ರೇರ್ಣಾ ಸ್ಥಳದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ 34 ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 34 ರೈತರನ್ನು ತಡರಾತ್ರಿ ಬಂಧಿಸಿ ಜೈಲಿಗೆ ಕಳುಹಿಸಲಾಯಿತು ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.