ಕರ್ನಾಟಕ

karnataka

ETV Bharat / bharat

ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ - Mallikarjuna Kharge - MALLIKARJUNA KHARGE

ಇಂದು ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ.

fight-to-protect-our-constitution-and-democracy-begins-today-says-mallikarjun-kharge
ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

By ANI

Published : Apr 19, 2024, 9:46 AM IST

ನವದೆಹಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಮತದಾರರನ್ನು ಕೋರಿದ್ದಾರೆ. ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟವು ಇಂದಿನಿಂದ ಪ್ರಾರಂಭವಾಗುತ್ತದೆ ಎಂದಿದ್ದಾರೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ.

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, "ನನ್ನ ಪ್ರೀತಿಯ ನಾಗರಿಕರೇ, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರು ಮತವನ್ನು ಎಚ್ಚರಿಕೆಯಿಂದ ಚಲಾಯಿಸಬೇಕು ಎಂದು ನಾನು ವಿನಂತಿಸುತ್ತೇನೆ. ಭಾರತದ ಭವಿಷ್ಯವನ್ನು ನಿರ್ಧರಿಸಲು ನೀವು ಇವಿಎಂನಲ್ಲಿ ಬಟನ್ ಒತ್ತುವುದಕ್ಕೂ ಮೊದಲು ಯೋಚಿಸಿ, ನಮ್ಮ ಸಂಸ್ಥೆಗಳು ಸರ್ವಾಧಿಕಾರದ ಮೂಲಕ ಬುಡಮೇಲು ಆಗಬೇಕು ಎಂದು ನೀವು ಬಯಸುತ್ತೀರಾ ಅಥವಾ ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸುತ್ತೀರಾ?. ಈಗ ನೀವು ಭಾರತದ ಹಣೆಬರಹ ನಿರ್ಧರಿಸುವವರು" ಎಂದು ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಮತದಾರರೆಲ್ಲರಿಗೂ ನಾನು ಆತ್ಮೀಯ ಸ್ವಾಗತ ಕೋರುತ್ತೇನೆ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನದೊಂದಿಗೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆ ಇಂದು ದೇಶದಲ್ಲಿ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಇಂದು ಮೊದಲ ಹಂತ ಮತದಾನವು ಅರುಣಾಚಲ ಪ್ರದೇಶ, ಅಸ್ಸೋಂ , ಬಿಹಾರ, ಛತ್ತೀಸ್​ಗಢ , ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ್, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ನಡೆಯುತ್ತಿದ್ದು, ಈ ಪೈಕಿ ತಮಿಳುನಾಡು, ಸಿಕ್ಕಿಂ, ನಾಗಾಲ್ಯಾಂಡ್, ಮಿಜೋರಾಂ, ಅರುಣಾಚಲ ಪ್ರದೇಶ, ಲಕ್ಷದ್ವೀಪ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

2024ರ ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿದೆ. ದೇಶದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ನಡೆಯುತ್ತಿರುವ ಎರಡನೇ ಅತಿ ದೀರ್ಘ ಮತದಾನ ಪ್ರಕ್ರಿಯೆಯಾಗಿದೆ ಇದಾಗಿದೆ. ಮೊದಲ ಲೋಕಸಭಾ ಚುನಾವಣೆಯೂ 1951 ಸೆಪ್ಟೆಂಬರ್​ನಿಂದ 1952ರ ಫೆಬ್ರವರಿ ನಡುವೆ ಐದು ತಿಂಗಳ ಕಾಲ ನಡೆದಿತ್ತು. 2019ರ ಸಾರ್ವತ್ರಿಕ ಚುನಾವಣೆಯೂ ಏಳು ಹಂತಗಳಲ್ಲಿ ನಡೆದಿತ್ತು.

ಇದನ್ನೂ ಓದಿ:ನನ್ನ ಮೇಲಿನ ಆರೋಪ ಸಾಬೀತಾದರೆ ಆ ದಿನವೇ ರಾಜಕೀಯ ತೊರೆಯುತ್ತೇನೆ: ಅಣ್ಣಾಮಲೈ ಸವಾಲು - K Annamalai

ABOUT THE AUTHOR

...view details