ವಾರಾಣಸಿ (ಉತ್ತರ ಪ್ರದೇಶ):ಕ್ಯಾಂಟ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ನಲ್ಲಿ ಬೆಂಕಿ ಅವಘಡ ಸಂಭವಿಸಿ, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ಲಾಟ್‌ಫಾರ್ಮ್ ಒಂದರ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ರೈಲ್ವೆ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸ್ ತಂಡಗಳು ಅಗ್ನಿಶಾಮಕ ಇಲಾಖೆಯೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ 150ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.