ವಾರಾಣಾಸಿ: ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಗರ್ಭಗುಡಿಯ ಬಳಿಯ ಕಿಟಕಿಯ ಸಮೀಪದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿತ್ತು.
ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ತಪ್ಪಿದ ಅನಾಹುತ - Kashi Vishwanath Temple - KASHI VISHWANATH TEMPLE
ಇಂದು ಬೆಳಗ್ಗೆ ಮಂಗಳಾರತಿ ಬಳಿಕ ಅನಾಹುತ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಕಾಶಿ ವಿಶ್ವನಾಥ ದೇಗುಲ (ANI)
Published : Sep 19, 2024, 2:34 PM IST
ಗುರುವಾರ ಬೆಳಿಗ್ಗೆ ಮಂಗಳ ಆರತಿ ಬಳಿಕ ಅನಾಹತ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಾಧನದಿಂದ ಬೆಂಕಿ ಆರಿಸಲಾಗಿದೆ. ಜ್ವಾಲೆ ಕಾಣಿಸಿಕೊಳ್ಳುತ್ತಿದ್ದಂತೆ ಗರ್ಭಗುಡಿ ಸಮೀಪದಲ್ಲಿದ್ದ ಭಕ್ತರನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು, ಅನಾಹುತ ತಪ್ಪಿಸಲಾಗಿದೆ. ಸದ್ಯ, ದೇವಾಲಯದ ಆಡಳಿತ ಮಂಡಳಿಯು ದೇವಾಲಯದ ವೈರಿಂಗ್ ವ್ಯವಸ್ಥೆಯನ್ನು ಪರಿಶೀಲಿಸುತ್ತಿದೆ.
ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ಆಗಿತ್ತು: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ