ಪುಣೆ(ಮಹಾರಾಷ್ಟ್ರ):ಮಂಡೈ ಮೆಟ್ರೋ ನಿಲ್ದಾಣದ ನೆಲ ಅಂತಸ್ತಿನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಪ್ರಕಾರ, "ವೆಲ್ಡಿಂಗ್ ಕೆಲಸ ಮಾಡುವಾಗ ಬೆಂಕಿಯ ಕಿಡಿ ಯಾವುದೋ ವಸ್ತುವಿಗೆ ತಗುಲಿ ಈ ಘಟನೆ ಸಂಭವಿಸಿದೆ".
"ಘಟನೆಯ ಬಗ್ಗೆ ಮಾಹಿತಿ ಸ್ವೀಕರಿಸಲಾಯಿತು. 5 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ" ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಸ್ಥಳೀಯ ಸಂಸದ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಮತ್ತು ಸಹಕಾರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು "ಬೆಂಕಿಯನ್ನು ನಂದಿಸಲಾಗಿದೆ. ಮತ್ತು ಈ ಘಟನೆಯಿಂದ ಮೆಟ್ರೋ ಸೇವೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ" ಎಂದು ತಮ್ಮ ಅಧಿಕೃತ X ಖಾತೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:ಮತ್ತೆ 24 ವಿಮಾನಗಳಿಗೆ ಬಾಂಬ್ ಬೆದರಿಕೆ: ಎರಡು ದಿನದಲ್ಲಿ 90 ಫ್ಲೈಟ್ಗಳಿಗೆ ಭೀತಿ