ಕರ್ನಾಟಕ

karnataka

ETV Bharat / bharat

ಇಂದಿನಿಂದ 18 ನೇ ಲೋಕಸಭೆಯ ಮೊದಲ ಅಧಿವೇಶನ: ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು - LOK SABHA SESSION BEGIN TODAY

ಲೋಕಸಭೆಯ 18 ನೇ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದೆ. ಇಂದಿನ ಪ್ರಮುಖ ವಿಷಯ ಎಂದರೆ, ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಇಂದು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

First Session Of 18th Lok Sabha Today
ಇಂದಿನಿಂದ 18 ನೇ ಲೋಕಸಭೆಯ ಮೊದಲ ಅಧಿವೇಶನ: ಸರ್ಕಾರದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು (ETV Bharat)

By ETV Bharat Karnataka Team

Published : Jun 24, 2024, 9:19 AM IST

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ. NEET-UG ಮತ್ತು UGC-NET ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ, ಹಾಗೂ ಹಂಗಾಮಿ ಸ್ವೀಕರ್​​ ನೇಮಕ ವಿಚಾರದ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಇದೇ ವಿಚಾರ ಸದನದಲ್ಲಿ ಗದ್ದಲವನ್ನು ಸೃಷ್ಟಿ ಮಾಡುವ ಸಾಧ್ಯತೆಗಳಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಹತಾಬ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಕರೆಯಲಿದ್ದಾರೆ.

ಜೂನ್ 26 ರಂದು ಲೋಕಸಭೆ ಸ್ಪೀಕರ್ ಆಯ್ಕೆ ನಡೆಯಲಿದೆ. ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾರ್ವತ್ರಿಕ ಚುನಾವಣೆ ನಂತರ ನಡೆಯುವ 18 ನೇ ಲೋಕಸಭೆಯ ಮೊದಲ ಅಧಿವೇಶನ ಇದಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್‌ಡಿಎ ಈ ಬಾರಿಯ ಲೋಕಸಭೆಯಲ್ಲಿ 293 ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನು ಇಂಡಿಯಾ ಒಕ್ಕೂಟ 234 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಬಾರಿ ಕಾಂಗ್ರೆಸ್ ಏಕಾಂಗಿಯಾಗಿ 99 ಸ್ಥಾನಗಳನ್ನು ಪಡೆದುಕೊಂಡಿದೆ.

ಕಾಂಗ್ರೆಸ್​ ಸಭೆ: ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸಂಸದರ ಸಭೆಯನ್ನು ಇಂದು ಸಂಸತ್ತಿನ ಸಿಪಿಪಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯ NEET-UG ಅಕ್ರಮಗಳ ಬಗ್ಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಪಕ್ಷದ ನೂತನ ಸಂಸತ್​ ಸದಸ್ಯರ ಜತೆ ಚರ್ಚಿಸಲಿದ್ದಾರೆ. ಈ ವೇಳೆ, ಬಿಜೆಪಿ ವಿರುದ್ಧ ಯಾವ ರೀತಿಯ ಹೋರಾಟ ನಡೆಸಬೇಕು ಎಂಬ ಬಗ್ಗೆ ಸಮಾಲೋಚಿಸಿ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ನಾಯಕ ಭರ್ತೃಹರಿ ಮಹತಾಬ್ ಅವರನ್ನು ನೇಮಿಸುವ ವಿವಾದವು ಕಲಾಪದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಅತ್ಯಂತ ಹಿರಿಯ ಸಂಸತ್​ ಸದಸ್ಯರಾದ ಕಾಂಗ್ರೆಸ್​ನ ಕೆ ಸುರೇಶ್ ಅವರನ್ನು ಸರ್ಕಾರ ಕಡೆಗಣಿಸಿ, ಮಹತಾಬ್​ ಅವರನ್ನ ಆಯ್ಕೆ ಮಾಡಿದೆ. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕಾಂಗ್ರೆಸ್‌ನ ಅತ್ಯಂತ ಹಿರಿಯ ದಲಿತ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡದೇ, ಏಳು ಅವಧಿಯ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ವೀಕರ್​ ಆಗಿ ನೇಮಕ ಮಾಡಿರುವುದನ್ನ ಕಾಂಗ್ರೆಸ್​ ಟೀಕಿಸಿದೆ. ಸಂಪ್ರದಾಯವನ್ನು ಮುರಿದು ಬಿಜೆಪಿ ಹಂಗಾಮಿ ಸ್ವೀಕರ್​ ನೇಮಕ ಮಾಡಿದೆ ಎಂದು ಆರೋಪಿಸಿದೆ.

18 ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24 ರಿಂದ ಆರಂಭವಾಗಿ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ. ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ:ಸುಪ್ರೀಂಕೋರ್ಟ್​ ನ್ಯಾಯಮೂರ್ತಿಯ ನೇತೃತ್ವದಲ್ಲಿ ನೀಟ್​ ಅಕ್ರಮ ತನಿಖೆಯಾಗಲಿ: ರಶೀದ್ ಅಲ್ವಿ - NEET paper leak

ABOUT THE AUTHOR

...view details