ರಾಯ್ಪುರ್, ಛತ್ತೀಸ್‌ಗಢ:ಛತ್ತೀಸ್ಗಡದ ಬಸ್ತಾರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ನಕ್ಸಲೀಯರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 8ಗಂಟೆಗೆ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಉತ್ತರ ಅಬುಜ್ಮದ್‌ನ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲ್ ವಿರೋಧಿ ಗುಂಪಿನ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.
ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದು, ಸ್ಥಳದಲ್ಲಿ ಸಿಕ್ಕ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದರು.
ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ರಾಯಪುರದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.